ಧರ್ಮಸ್ಥಳಕ್ಕೆ ಆಗಮಿಸುವ ಮೋದಿಗೆ ತುಳುನಾಡಿನ ಶೈಲಿಯಲ್ಲಿ ಸ್ವಾಗತ

Posted By:
Subscribe to Oneindia Kannada

ಮಂಗಳೂರು, ಅಕ್ಟೋಬರ್ 25 : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 29 ಆಗಮಿಸುವುದು ಖಚಿತವಾಗಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ.

ಅಕ್ಟೋಬರ್ 29ಕ್ಕೆ ಧರ್ಮಸ್ಥಳಕ್ಕೆ ನರೇಂದ್ರ ಮೋದಿ

ತುಳುನಾಡಿನ ಶೈಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತ ನಡೆಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಅವರು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

In Pics : ಮೋದಿ ಸ್ವಾಗತಕ್ಕೆ ಸಿಂಗಾರಗೊಂಡ ಧರ್ಮಸ್ಥಳ

Virendra Hegde decided to welcome Modi in Tulu Nadu culture at Dharmasthala on Oct 29

ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 29 ರಂದು ಬೆಳಗ್ಗೆ 11:30ಕ್ಕೆ ಧರ್ಮಸ್ಥಳದ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಮೋದಿ ಬಹಿರಂಗ ಸಭೆ ನಡೆಸಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಬ್ಯಾಂಕುಗಳ ಸಹಭಾಗಿತ್ವದಲ್ಲಿ ರಾಜ್ಯದ 12 ಲಕ್ಷ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಜನ್ ಧನ್ ಯೋಜನೆ ಅನ್ವಯ ಬ್ಯಾಂಕ್ ಖಾತೆಗಳನ್ನು ತೆರೆದಿದ್ದು, ಈ ಸದಸ್ಯರಿಗೆ ರೂಪೇ ಕಾರ್ಡ್ ಗಳನ್ನು ಪ್ರಧಾನಿ ವಿತರಿಸಲಿದ್ದಾರೆ.

ರಾಜ್ಯದಲ್ಲಿರುವ ಸ್ವಸಹಾಯ ಸಂಘಗಳ ವ್ಯವಹಾರಗಳನ್ನು ಸಂಪೂರ್ಣವಾಗಿ ನಗದು ರಹಿತ ಮಾಡಿ ತಂತ್ರಜ್ಞಾನ ಆಧಾರಿತ ವ್ಯವಹಾರ ಪ್ರೇರೇಪಿಸಲು ಗ್ರಾಮಾಭಿವೃದ್ಧಿ ಯೋಜನೆಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಪ್ಪಂದ ಮಾಡಿಕೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲೇ ಈ ಒಪ್ಪಂದಕ್ಕೆ ಅಂಕಿತ ಬೀಳಲಿದೆ .

ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬುದು ಜನರ ಕೊರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಬಳಿ ಬಹಿರಂಗವಾಗಿ ಈ ಕುರಿತು ಪ್ರಸ್ಥಾಪಿಸಲಿದ್ದೇನೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Dr Virendra Hegde has made all kinds of preparations to welcome Prime Minister Narendra Modi in Tulu Nadu culture at Dharmasthala, on October 29. And Prime Minister Narendra Modi will visit Dharmasthala Manjunatheshwara Temple and submit special pooja to God Manjunath.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ