ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರತ್ಯೇಕ ಘಟನೆ: ಭಕ್ತರಿದ್ದ ಕಾರ್‌ ಮೇಲೆ ಮುನಿಸಿಕೊಂಡ ಕಾಡಾನೆಗಳು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು: ಕಾಡಾನೆಯೊಂದು ಹಠಾತ್ ದಾಳಿ ನಡೆಸಿದ ಪರಿಣಾಮ ಕಾರು ಜಖಂಗೊಂಡು, ಕಾರಿನಲ್ಲಿದ್ದ ಓರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಳಿನೆಲೆಯಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಮಾರುತಿ ಓಮ್ನಿ ಕಾರು ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಘಟನೆ ನಡೆದಿದೆ.

ಪ್ರವಾಸಿಗರ ಮೇಲೆ ದಾಳಿಗೆ ಮುಂದಾದ ಆನೆ: ವೈರಲ್ ವಿಡಿಯೋಪ್ರವಾಸಿಗರ ಮೇಲೆ ದಾಳಿಗೆ ಮುಂದಾದ ಆನೆ: ವೈರಲ್ ವಿಡಿಯೋ

ಬಿಳಿನೆಲೆಯ ಸಿಪಿಸಿಆರ್ ಐ ಕಚೇರಿ ಸಮೀಪ ಕಾಡಾನೆ ರಸ್ತೆ ಹಾದು ಹೋಗುತ್ತಿದ್ದುದನ್ನು ಕಂಡ ಕಾರು ಚಾಲಕ ಆನೆಯ ಸಮೀಪದಲ್ಲೇ ಕಾರನ್ನು ನಿಲ್ಲಿಸಿದ್ದಾರೆ.

wild elephant attack on car near dakshina kannada

ಮುಂದೆ ಸಾಗುತ್ತಿದ್ದ ಕಾಡಾನೆ ಹಿಂತಿರುಗಿ ಬಂದು ಸೊಂಡಿಲಿನಿಂದ ಕಾರಿನ ಮುಂಭಾಗಕ್ಕೆ ಬಡಿದು ಹಾನಿಯುಂಟು ಮಾಡಿದೆ. ಇದೇ ವೇಳೆ, ಬಸ್ಸೊಂದು ಹಾರ್ನ್ ಮಾಡುತ್ತಾ ಬಂದ ಕಾರಣ ಗಾಬರಿಗೊಂಡ ಕಾಡಾನೆ ಕಾರನ್ನು ಬಿಟ್ಟು ಓಡಿ ಹೋಗಿದೆ. ಇದರಿಂದ ನಡೆಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿದೆ.

ಆನೆ ಬಂತೊಂದಾನೆ: ಹಳಿಯಾಳಕ್ಕೆ ದಾರಿ ತಪ್ಪಿ ಬಂದ ಕಾಡಾನೆಆನೆ ಬಂತೊಂದಾನೆ: ಹಳಿಯಾಳಕ್ಕೆ ದಾರಿ ತಪ್ಪಿ ಬಂದ ಕಾಡಾನೆ

ಘಟನೆಯಲ್ಲಿ ಒಬ್ಬರು ಗಂಭೀರ ಗಾಯಗೊಂಡಿದ್ದು, ಇನ್ನುಳಿದವರು ಅಪಾಯದಿಂದ ಪಾರಾಗಿದ್ದಾರೆ.

wild elephant attack on car near dakshina kannada

ಕಡಬ ಸಮೀಪ ದಾಳಿ
ಮತ್ತೊಂದು ಘಟನೆಯಲ್ಲಿ ಕಡಬ ಸಮೀಪದ ನೆಟ್ಟಣ ಎಂಬಲ್ಲಿ ಕಾಡಾನೆಯೊಂದು ಕಾರಿನ ಮೇಲೆ ದಾಳಿ ಮಾಡಿದೆ.

ಶನಿವಾರ ಮುಂಜಾನೆ ಕುಕ್ಕೆ ಸುಬ್ರಹ್ಮಣ್ಯದಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಒಮ್ನಿ ಕಾರನ್ನು ಕಾಡಾನೆ ಅಡ್ಡಗಟ್ಟಿದೆ.

ಆಗುಂಬೆಯಲ್ಲಿ ಮತ್ತೆ ಕಾಣಿಸಿಕೊಂಡ ಒಂಟಿ ಸಲಗಆಗುಂಬೆಯಲ್ಲಿ ಮತ್ತೆ ಕಾಣಿಸಿಕೊಂಡ ಒಂಟಿ ಸಲಗ

ಕಾರ್‌ನಲ್ಲಿದ್ದ ಎಲ್ಲ ಎಂಟು ಮಂದಿ ಆನೆ ದಾಳಿಯಿಂದ ತಪ್ಪಿಸಿಕೊಂಡರೂ, ಕಾರ್‌ಅನ್ನು ಗುರಿಯಾಗಿರಿಸಿಕೊಂಡ ಆನೆ ಅದರ ಮುಂಭಾಗವನ್ನು ಸಂಪೂರ್ಣ ಜಖಂಗೊಳಿಸಿದೆ.

ಚಿಕ್ಕಮಗಳೂರಿನ ಗಿರೀಶ್ ಎಂಬುವವರ ಕುಟುಂಬ ಕಾರ್‌ನಲ್ಲಿ ಕುಕ್ಕೆ ಸುಬ್ರಮಣ್ಯಕ್ಕೆ ತೆರಳಿ, ಮನೆಗೆ ವಾಪಸ್ಸಾಗುತ್ತಿತ್ತು.

English summary
In two seperate incidents, wild elephants attacked Maruti Omni cars on Saturday near Magaluru. One person injured in a attack took place in Dakshina Kannada district's Sullia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X