ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಲ್ಲಿ ಯಡಿಯೂರಪ್ಪಗೆ ಅದ್ದೂರಿ ಸ್ವಾಗತ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಏಪ್ರಿಲ್ 25 : ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಪಟಾಕಿ ಸಿಡಿಸಿ, ಬೈಕ್ ಜಾಥಾ ಮಾಡುವ ಮೂಲಕ ಕಾರ್ಯಕರ್ತರು ಅವರನ್ನು ಬರಮಾಡಿಕೊಂಡರು.

ಶನಿವಾರ ಸಂಜೆ ಬಂಟ್ವಾಳದ ಕಲ್ಲಡ್ಕದ ಶ್ರೀರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಅವರು ದಕ್ಷಿಣ ಕನ್ನಡಕ್ಕೆ ಆಗಮಿಸಿದ್ದರು. ಸಂಸದ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವ ಕೃಷ್ಣ ಪಾಲೇಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪ್ ಸಿಂಹ ನಾಯಕ್ ಮುಂತಾದವರು ಯಡಿಯೂರಪ್ಪ ಅವರನ್ನು ಸ್ವಾಗತಿಸಿದರು. [ಯಡಿಯೂರಪ್ಪ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸರ್ಕಾರ]

yeddyurappa

ಮಾಧ್ಯಮದವರ ಜೊತೆ ಮಾತನಾಡಿದ ಯಡಿಯೂರಪ್ಪ ಅವರು, 'ಬರ ಪರಿಹಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಇನ್ನೂ ಯಾವುದೇ ಮುಂಜಾಗೃತೆ ಕ್ರಮ ಕೈಗೊಂಡಿಲ್ಲ' ಎಂದು ಆರೋಪಿಸಿದರು. [ಬರಪರಿಹಾರ ನಿಧಿಗೆ ಬಿಜೆಪಿ ಸದಸ್ಯರ ತಿಂಗಳ ಸಂಬಳ]

'ಕೇಂದ್ರದಿಂದ ಈಗಾಗಲೇ ಬರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿದೆ. ಅಲ್ಲದೇ ಬರಪರಿಹಾರಕ್ಕೆ ಕೇಂದ್ರದಿಂದ ಅನುದಾನವು ರಾಜ್ಯಕ್ಕೆ ಬಂದಿದೆ. ರಾಜ್ಯ ಸರ್ಕಾರ ಮಾತ್ರ ಇಲ್ಲಿಯ ತನಕ ಹಣ ಹಂಚಿಕೆ ಮಾಡಿಲ್ಲ' ಎಂದು ಯಡಿಯೂರಪ್ಪ ದೂರಿದರು. [ಏ.27ರಿಂದ ಐದು ದಿನ ಯಡಿಯೂರಪ್ಪ ಬರ ಪ್ರವಾಸ]

'ಬರ ಪರಿಸ್ಥಿತಿ ಬಗ್ಗೆ ವಿವರಣೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಇದುವರೆಗೂ ಭೇಟಿಯಾಗಿಲ್ಲ. ದೆಹಲಿಗೆ ಹೋಗಿ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಬರಲಿ' ಎಂದು ಯಡಿಯೂರಪ್ಪ ವ್ಯಂಗ್ಯವಾಡಿದರು.

ಕಾನೂನಿನ ಮೂಲಕ ಉತ್ತರ : 'ತಮ್ಮ ವಿರುದ್ಧದ 15 ಅಕ್ರಮ ಡಿನೋಟಿಫಿಕೇಷನ್ ಪ್ರಕರಣಗಳನ್ನು ರದ್ದುಪಡಿಸಿರುವ ಹೈಕೋರ್ಟ್ ತೀರ್ಪಿನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿರುವುದು ಸೇಡಿನ ರಾಜಕಾರಣ' ಎಂದು ಯಡಿಯೂರಪ್ಪ ಹೇಳಿದರು.

'ರಾಜ್ಯ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಎಲ್ಲರ ಕಾಲದಲ್ಲೂ ಡಿನೋಟಿಫಿಕೇಷನ್ ಆಗಿದೆ. ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಕಾನೂನಿನ ಮೂಲಕವೇ ಉತ್ತರ ಕೊಡಲಾಗುತ್ತದೆ' ಎಂದು ಅವರು ಹೇಳಿದರು.

English summary
Karnataka BJP president B.S. Yeddyurappa who visited Dakshina Kannada for the first time on Saturday after assuming charge as president was given a grand welcome. The party supporters took him on a procession.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X