ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತೊಕ್ಕೊಟ್ಟುವಿನಲ್ಲಿ ಲಾರಿ ಮಗುಚಿ ಕ್ಲೀನರ್ ಸಾವು, ಪ್ರತಿಭಟನೆ

|
Google Oneindia Kannada News

ಮಂಗಳೂರು, ಡಿಸೆಂಬರ್ 18: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯೊಂದು ಮಗುಚಿ ಬಿದ್ದು ಅದರಲ್ಲಿದ್ದ ಕ್ಲೀನರ್ ಸಾವನ್ನಪಿದ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ನಡೆದಿದೆ.

ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಕ್ಕೋಟ್ಟಿನಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೋಲಿಸ್ ಅಧಿಕಾರಿ ನಿಲ್ಲಿಸಲು ಸೂಚಿಸಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

Youth died in lorry accident at Thokkottu

ಮುಂಬೈ ಆಸ್ಪತ್ರೆ ಅಗ್ನಿ ದುರಂತ: ಮೃತರ ಸಂಖ್ಯೆ 8 ಕ್ಕೆ ಏರಿಕೆಮುಂಬೈ ಆಸ್ಪತ್ರೆ ಅಗ್ನಿ ದುರಂತ: ಮೃತರ ಸಂಖ್ಯೆ 8 ಕ್ಕೆ ಏರಿಕೆ

ಮೃತ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ಮೂಲ ನಿವಾಸಿ ವಸಂತ ಕುಮಾರ್ (25) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟು ಜಂಕ್ಷನ್ ನಲ್ಲಿ ಓವರ್ ಬ್ರಿಡ್ಜ್ ಕಾಮಗಾರಿ ನಡೆಯುತ್ತಿದ್ದು, ಲಾರಿಯನ್ನು ಸೈಡಿಗೆ ಒಯ್ಯುವಾಗ ಲಾರಿಯ ಚಕ್ರ ಚರಂಡಿಗೆ ಬಿದ್ದು ಲಾರಿ ಪಲ್ಟಿಯಾಗಿದೆ.

Youth died in lorry accident at Thokkottu

ಈ ವೇಳೆ, ಕ್ಲೀನರ್ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಪೊಲೀಸರ ನಿರ್ಲಕ್ಷ್ಯ ಖಂಡಿಸಿ ಸ್ಥಳೀಯರು ಮಂಗಳೂರು - ಕೇರಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ತಡೆದು ಎರಡು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಹೆದ್ದಾರಿ ಉದ್ದಕ್ಕೂ ಟ್ರಾಫಿಕ್ ಜಾಮ್ ಆಗಿದೆ. ಹೆದ್ದಾರಿ ಪ್ರಾಧಿಕಾರದ ವಿಳಂಬ ನೀತಿ ಮತ್ತು ಪೊಲೀಸರ ನಿರ್ಲಕ್ಷ್ಯ ವಿರುದ್ಧ ಸ್ಥಳೀಯರು ಧಿಕ್ಕಾರ ಕೂಗಿದ್ದಾರೆ.

English summary
A lorry that was signaled by the traffic police to stop fell on a youth . This incident happened in Thokkottu at Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X