ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 1 ಕೋಟಿ ರುಪಾಯಿ ನಗದು ವಶಕ್ಕೆ

ಮಂಗಳೂರು, ಡಿಸೆಂಬರ್ 8: ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1 ಕೋಟಿ ರುಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಕಂಕನಾಡಿ ನಗರ ಠಾಣೆ ಪೊಲೀಸರು ಗಸ್ತಿನಲ್ಲಿರುವ ಸಂದರ್ಭದಲ್ಲಿ ಈ ಅಕ್ರಮ ಹಣ ಸಾಗಾಣಿಕೆ ಪತ್ತೆ ಹಚ್ಚಿದ್ದಾರೆ.

ಕಂಕನಾಡಿ ನಗರ ಠಾಣೆ ಪೊಲೀಸರು ಗಸ್ತಿನಲ್ಲಿರುವ ಸಂದರ್ಭದಲ್ಲಿ ಅಕ್ರಮ ಹಣ ಸಾಗಾಣಿಕೆ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಪಂಪ್ ವೆಲ್ ವೃತ್ತದ ಬಳಿ ಹುಂಡೈ ಐ20 ಕಾರನ್ನು ಅಡ್ಡಗಟ್ಟಿ, ತಪಾಸಣೆ ನಡೆಸಿದಾಗ ಈ ಅಕ್ರಮ ಹಣ ಸಾಗಾಣಿಕೆ ಪತ್ತೆಯಾಗಿದೆ.

1 crore rupees cash seized by police in Mangaluru

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿ ನಿವಾಸಿಗಳಾದ ತಾನಾಜಿ (54), ಅಮೂಲ್ ಮಾಲಿ(29), ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿ ದಿನೇಶ್ ಪ್ರಕಾಶ್ ಶಿಂಧೆ ಎಂದು ಗುರುತಿಸಲಾಗಿದೆ.

ಬಂಧಿತರಿಂದ ಒಂದು ಕೋಟಿ ರೂಪಾಯಿ ನಗದು, ಒಂದು ಕಾರು, ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ .

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+