ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ದಾಖಲೆ ರಹಿತ 1 ಕೋಟಿ ರೂ.ವಶ
ಮಂಗಳೂರು, ಮೇ 17:ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ದಾಖಲೆ ರಹಿತ ಸಾಗಾಟ ಮಾಡುತ್ತಿದ್ದ 1 ಕೋಟಿ ರೂಪಾಯಿ ಪತ್ತೆ ಮಾಡಲಾಗಿದೆ. ದಾಖಲೆ ರಹಿತ ಹಣವನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ಮಲ್ಲೇಶ್ವರಂ ನಿವಾಸಿ ಮಂಜುನಾಥ (56) ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಎಂದು ಹೇಳಲಾಗಿದೆ. ನಗರದ ಬಂದರು ಠಾಣೆಯ ಪೊಲೀಸರು ಬೆಳಗ್ಗೆ ಗಸ್ತು ತಿರುಗುತ್ತಿದ್ದಾಗ ಅನುಮಾನದ ಮೇರೆಗೆ ವ್ಯಕ್ತಿಯೊಬ್ಬನನ್ನು ತಪಾಸಣೆ ನಡೆಸಿದಾಗ ದಾಖಲೆ ರಹಿತ ಹಣ ಪತ್ತೆಯಾಗಿದೆ.

ಮಂಜುನಾಥನ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣ ಎಲ್ಲಿಂದ ಮತ್ತು ಯಾರಿಗೆ ತಲುಪಿಸಲು ಸಾಗಾಟ ಮಾಡಲಾಗುತ್ತಿತ್ತು ಎನ್ನುವುದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.












Click it and Unblock the Notifications