ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಸ್ಕ್ ನಿಯಮ ಉಲ್ಲಂಘನೆ; ದ.ಕ. ಜಿಲ್ಲೆಯಲ್ಲಿ ವಸೂಲಿಯಾದ ದಂಡವೆಷ್ಟು?

By Lekhaka
|
Google Oneindia Kannada News

ಮಂಗಳೂರು, ನವೆಂಬರ್ 4: ಕೊರೊನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಕೆಲವು ನಿಯಮಗಳನ್ನು ಜಾರಿಗೆ ತಂದಿದೆ. ಕೋವಿಡ್ 19 ನಿಯಮಗಳನ್ನುಜಾರಿಗೆ ತಂದು ಆದೇಶವನ್ನು ಉಲ್ಲಂಘಿಸುವವರಿಗೆ ದಂಡವನ್ನೂ ವಿಧಿಸುತ್ತಿದೆ. ಆದರೂ ಜನ ನಿರ್ಲಕ್ಷ್ಯ ತೋರುವುದು ತಪ್ಪಿಲ್ಲ.

ಮಂಗಳೂರಿನಲ್ಲೂ ಮಾಸ್ಕ್ ಧರಿಸದೇ ಇರುವವರ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ಪ್ರತಿನಿತ್ಯ ಮಾಸ್ಕ್ ಧರಿಸದೇ ನಿಯಮ ಉಲ್ಲಂಘನೆ ಮಾಡುತ್ತಿರುವ ಹೊಸ ಹೊಸ ಪ್ರಕರಣಗಳು ದಾಖಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಲ್ಲಿಯವರೆಗೂ ಒಟ್ಟು 10991 ಪ್ರಕರಣಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಕೋವಿಡ್ -19 ನಿಯಮ ಉಲ್ಲಂಘನೆ; ರಾಮನಗರದಲ್ಲಿ ದಾಖಲಾದ ಪ್ರಕರಣವೆಷ್ಟು?ಕೋವಿಡ್ -19 ನಿಯಮ ಉಲ್ಲಂಘನೆ; ರಾಮನಗರದಲ್ಲಿ ದಾಖಲಾದ ಪ್ರಕರಣವೆಷ್ಟು?

ಈ ಬಗ್ಗೆ ಜಿಲ್ಲಾಡಳಿತ ಅಧಿಕೃತ ವರದಿಯನ್ನು ನೀಡಿದೆ. 10991 ಪ್ರಕರಣಗಳಿಂದ ಸುಮಾರು 12,07,627 ರೂಪಾಯಿಗಳನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದೆ. ಪೊಲೀಸ್ ಇಲಾಖೆ, ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಕೋವಿಡ್ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.

Dakshina Kannada: 1207627 Fine Collected For Breaking Covid 19 Rules

ಸಾರ್ವಜನಿಕ ಪ್ರದೇಶದಲ್ಲಿ ಪ್ರಯಾಣಿಸುವವರು, ವಾಹನಗಳಲ್ಲಿ ಸಂಚರಿಸುವವರು, ಕಚೇರಿಗಳಿಗೆ ತೆರಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದೂ ಮುಖ್ಯವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ.3ರ ವರದಿಯಂತೆ, ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 30511 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 680 ಆಗಿದೆ. 28,146 ಮಂದಿ ಗುಣಮುಖರಾಗಿದ್ದಾರೆ.

English summary
10991 cases filed and 1207627 fine collected for breaking covid 19 rules in dakshina kannada district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X