ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡದಲ್ಲಿ 14 ದಿನದಲ್ಲಿ 128 ಮಂದಿಗೆ ಡೆಂಗ್ಯೂ ಜ್ವರ

|
Google Oneindia Kannada News

ಮಂಗಳೂರು, ಜುಲೈ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣ ಹೆಚ್ಚುತ್ತಿರುವುದು ತೀವ್ರ ಆತಂಕ ಸೃಷ್ಟಿಸಿದೆ. ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಳೆದ 14 ದಿನಗಳಲ್ಲಿ ಒಟ್ಟು 128 ಮಂದಿಗೆ ಡೆಂಗ್ಯೂ ಇರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 2 ವಾರಗಳಲ್ಲಿ ತೀವ್ರ ಜ್ವರ ಕಾಣಿಸಿಕೊಂಡಿರುವ 400ಕ್ಕಿಂತಲೂ ಅಧಿಕ ಜನರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 128 ಮಂದಿಯಲ್ಲಿ ಡೆಂಗ್ಯೂ ಇರುವುದು ದೃಢಪಟ್ಟಿದೆ. ಈ ನಡುವೆ ಮಲೇರಿಯಾ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

 ಮಂಗಳೂರಿನಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ, ಜನರಲ್ಲಿ ಆತಂಕ ಮಂಗಳೂರಿನಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ, ಜನರಲ್ಲಿ ಆತಂಕ

ಮಲೇರಿಯಾ ಹಾಗೂ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಪ್ರದೇಶಗಳಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನಿರಂತರ ಭೇಟಿ ನೀಡುವಂತೆ, ಸೊಳ್ಳೆಗಳು ಉತ್ಪತ್ತಿಯಾಗುವ ಪ್ರದೇಶಗಳನ್ನು ನಾಶಪಡಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಶಾಲಾ ಮತ್ತು ಅಂಗನವಾಡಿ ಕಟ್ಟಡಗಳ ಸುತ್ತಮುತ್ತ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಲು ಸೂಚಿಸಲಾಗಿದೆ. ನಿರ್ಮಾಣ ಹಂತದ ಕಟ್ಟಡ, ಗುಜರಿ ಅಂಗಡಿಗಳ ಬಳಿ ಸ್ವಚ್ಛತೆ ಕೈಗೊಳ್ಳದವರಿಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಜಿಲ್ಲಾಡಳಿತ ನಿರ್ದೇಶನ ನೀಡಿದೆ.

128 Dengue cases in Dakshina Kannada

ಮಳೆ ಕಡಿಮೆಯಾಗಿ ಆಗಾಗ ಬಿಸಿಲಿನ ವಾತಾವರಣ ಕಂಡುಬರುವುದರಿಂದ ನಿಂತ ನೀರಿನಲ್ಲಿ ಸೊಳ್ಳೆಗಳು ಬೆಳೆಯುತ್ತಿವೆ. ಮಂಗಳೂರು ನಗರದಲ್ಲಿ ಹೆಚ್ಚಿನ ಸೊಳ್ಳೆ ಉತ್ಪಾದನೆಯಾಗುತ್ತಿದ್ದು, ಪ್ರತಿಯೊಬ್ಬರೂ ತಮ್ಮ ಮನೆ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

 ಕರಾವಳಿಯಲ್ಲಿ ಡೆಂಗ್ಯೂ, ಮಲೇರಿಯಾ ತಡೆಗೆ ಮುಂಜಾಗ್ರತಾ ಕ್ರಮ ಕರಾವಳಿಯಲ್ಲಿ ಡೆಂಗ್ಯೂ, ಮಲೇರಿಯಾ ತಡೆಗೆ ಮುಂಜಾಗ್ರತಾ ಕ್ರಮ

'ಕಳೆದ ಜನವರಿಯಿಂದ ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 319 ಜನರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಕಳೆದ 2 ವಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೇರಿದಂತೆ ಬೆಳ್ತಂಗಡಿ, ಪುತ್ತೂರು, ಸುಳ್ಯ ಭಾಗದ 128 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಡೆಂಗ್ಯೂ ಕಂಡು ಬಂದ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರು, ಸರಕಾರಿ ಆಸ್ಪತ್ರೆ ಹಾಗು ಆರೋಗ್ಯ ಕೇಂದ್ರದ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಪರಿಸರ ಸ್ವಚ್ಛತಾ ಜಾಗೃತಿ ಮೂಡಿಸುತ್ತಿದ್ದಾರೆ. ಡೆಂಗ್ಯೂ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳಲ್ಲಿ ಡೆಂಗ್ಯೂ ಜ್ವರದ ಲಕ್ಷಣಗಳು ಕಂಡುಬಂದರೆ ರಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ' ಎಂದು ಮಾಹಿತಿ ನೀಡಿದರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್.

 ಮಂಗಳೂರಿನಲ್ಲಿ ಮತ್ತೆ ಕಾಣಿಸಿಕೊಂಡಿದೆ ಡೆಂಗ್ಯೂ ಮಂಗಳೂರಿನಲ್ಲಿ ಮತ್ತೆ ಕಾಣಿಸಿಕೊಂಡಿದೆ ಡೆಂಗ್ಯೂ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಚಾರ್ವಾಕ, ದೋಳ್ಪಾಡಿ, ಕಾಣಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಡೆಂಗ್ಯೂ ಶಂಕಿತ ಜ್ವರ ಬಾಧಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ.

English summary
400 suspected dengue cases reported in Mangaluru and Dakshina Kannada. Out of 400 cases 128 cases identified as dengue positive
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X