ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ:ಇಬ್ಬರು ಸಾವು
ಮಂಗಳೂರು, ಮೇ 05:ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಉಜಿರೆಯ ಸಿದ್ಧವನ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರನ್ನು ವಿಘ್ನೇಶ್, ಕ್ಷಿತಿಜ್ ಜೈನ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸುಶಾಂತ್, ಹರ್ಷಿತ್ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಲ್ವರು ಸ್ನೇಹಿತರು ಧರ್ಮಸ್ಥಳದಿಂದ ಉಜಿರೆ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಕಾರು ಸಿದ್ಧವನ ಬಳಿ ತಲುಪುತ್ತಿದ್ದಂತೆ ರಸ್ತೆ ಬದಿಯ ಮರವೊಂದು ಏಕಾಏಕಿ ಧರೆಗುರುಳಿದೆ. ಕಾರ್ ನ ಹಿಂಬದಿ ಸೀಟ್ ನಲ್ಲಿ ಕೂತಿದ್ದ ವಿಘ್ನೇಶ್, ಕ್ಷಿತಿಜ್ ಅವರ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.












Click it and Unblock the Notifications