ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದ ಇಬ್ಬರು ಬಾಲಕರಿಗೆ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿ

|
Google Oneindia Kannada News

ಮಂಗಳೂರು, ಜನವರಿ 25: ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಕರ್ನಾಟಕದ ಇಬ್ಬರು ಮಕ್ಕಳು ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ನೀಡುವ 2021ನೇ ಸಾಲಿನ 'ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ' ಪ್ರಶಸ್ತಿಗೆ ದೇಶದ ಒಟ್ಟು 32 ಮಕ್ಕಳು ಆಯ್ಕೆಯಾಗಿದ್ದಾರೆ.

ಗಣರಾಜ್ಯೋತ್ಸವ ದಿನಾಚರಣೆ 2021: ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಆಯ್ಕೆಗಣರಾಜ್ಯೋತ್ಸವ ದಿನಾಚರಣೆ 2021: ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಆಯ್ಕೆ

ನವೋನ್ವೇಷಣೆ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಹಾಗೂ ದೆಹಲಿ ಆರ್ಮಿ ಪಬ್ಲಿಕ್ ಸ್ಕೂಲ್​​ನಲ್ಲಿ ಕಲಿಯುತ್ತಿರುವ ಬೆಂಗಳೂರಿನ ವೀರ್ ಕಶ್ಯಪ್ ಪ್ರಶಸ್ತಿಗೆ ಆಯ್ಕೆಯಾದ ಇಬ್ಬರು ಕನ್ನಡಿಗ ಮಕ್ಕಳಾಗಿದ್ದಾರೆ. ಈ ಇಬ್ಬರಿಗೂ ಆವಿಷ್ಕಾರ ವಲಯದಲ್ಲಿ ಬಾಲ ಪುರಸ್ಕಾರ ಪ್ರಶಸ್ತಿ ಲಭಿಸಿದೆ.

 2 Karnataka Kids Awarded Pradhan Mantri Rashtriya Bal Puraskar

ಸರ್ಕಾರ ಪ್ರತೀ ವರ್ಷ ಬಾಲ ಪ್ರತಿಭೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತದೆ. ಬಾಲ ಪುರಸ್ಕಾರ ಪ್ರಶಸ್ತಿಯು ಒಂದು ಪದಕ, 1 ಲಕ್ಷ ರೂ. ನಗದು ಒಳಗೊಂಡಿದೆ. ವಿಜೇತರೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

ವೀರ್ ಕಶ್ಯಪ್ ಅವರು ಕೊರೊನಾ ವೈರಸ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಹಾವು-ಏಣಿ ಮಾದರಿಯ 'ಕೊರೊನಾ ಯುಗ' ಎಂಬ ವಿಶಿಷ್ಟ ಆಟ ಕಂಡುಹಿಡಿದಿದ್ದರು.

 2 Karnataka Kids Awarded Pradhan Mantri Rashtriya Bal Puraskar

ರಾಕೇಶ್ ಕೃಷ್ಣ ವಿವೇಕಾನಂದ ವಿದ್ಯಾವರ್ಧಕ ಸಂಘ ನಡೆಸುವ ಸಂಸ್ಥೆಯ ವಿದ್ಯಾರ್ಥಿ. ಸಂಘದ ಸಹಕಾರ, ಶಿಕ್ಷಕರ ಮಾರ್ಗದರ್ಶನ, ಪೋಷಕರ ಪ್ರೋತ್ಸಾಹ ತನ್ನ ಈ ಸಾಧನೆಯಲ್ಲಿ ಪ್ರಧಾನ ಪಾತ್ರ ವಹಿಸಿದೆ ಎಂದು ಪ್ರಶಸ್ತಿ ಪುರಸ್ಕೃತ ಪುತ್ತೂರಿನ ರಾಕೇಶ್ ಹೇಳಿಕೊಂಡಿದ್ದಾರೆ. ಈ ವಿದ್ಯಾರ್ಥಿ ಪ್ರಧಾನಿ ನರೇಂದ್ರ ಮೋದಿ ಜತೆ ಸಂವಾದ ನಡೆಸಿದನು.

English summary
Two children from Karnataka are being awarded the Pradhan Mantri Rashtriya Bal Puraskar by the central government during the Republic Day celebrations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X