ಮಂಗಳೂರಿನಲ್ಲಿ ವಿವಾಹಿತನಿಂದ ಯುವತಿಯ ಮೇಲೆ ಆತ್ಯಾಚಾರ
ಮಂಗಳೂರು, ಮಾರ್ಚ್ 12: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಶೆಡ್ಡೆ ನಿವಾಸಿ ಜಗದೀಶ್ (53) ಎಂಬಾತನ ಮೇಲೆ ಮಂಗಳೂರಿನ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿ ಜಗದೀಶ್ ಗುತ್ತಿಗೆದಾರರಾಗಿದ್ದು, ತನ್ನ ಸೈಟ್‌ನಲ್ಲಿ ಕೆಲಸಕ್ಕೆ ಬರುತ್ತಿದ್ದ ಉತ್ತರ ಕರ್ನಾಟಕ ಮೂಲದ ಯುವತಿಯನ್ನು ಪರಿಚಯ ಮಾಡಕೊಂಡಿದ್ದ. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ.

ಆರೋಪಿ ಜಗದೀಶ್ ಗೆ ಈಗಾಗಲೇ ಮದುವೆಯಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಜಗದೀಶ್ ವಿರುದ್ಧ ಐಪಿಸಿ ಸೆಕ್ಷನ್ 376ರ ಪ್ರಕಾರ ಅತ್ಯಾಚಾರ ಆರೋಪ ಮಾತ್ರವಲ್ಲದೆ, ಯುವತಿಗೆ ಬೆದರಿಕೆ ಹಾಕಿದದ ಬಗ್ಗೆ ಐಪಿಸಿ 506ರಂತೆ ಪ್ರಕರಣ ದಾಖಲಿಸಲಾಗಿದೆ.












Click it and Unblock the Notifications