ಬೆಳ್ತಂಗಡಿ; ಆಶ್ರಮದಲ್ಲಿ 210 ಜನರಿಗೆ ಕೋವಿಡ್ ಸೋಂಕು!
ಮಂಗಳೂರು, ಮೇ 30; ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಕೊರೊನಾ ಮಾಹಾಸ್ಫೋಟವಾಗಿದೆ. ತಾಲೂಕಿನ ನೆರಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಡಿಬಾಗಿಲು ಪ್ರದೇಶದಲ್ಲಿರುವ ಸಿಯೋನ್ ಆನಾಥಾಶ್ರಮದಲ್ಲಿ 210 ಜನರಿಗೆ ಸೋಂಕು ಕಾಣಿಸಿಕೊಂಡಿದೆ.
ಆಶ್ರಮದ 270 ಜನರಲ್ಲಿ 210 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸಾಮೂಹಿಕ ಪರೀಕ್ಷೆಯನ್ನು ಮಾಡಿದ್ದು, ಈ ವೇಳೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಒಟ್ಟು 270 ಜನರಿರುವ ಆಶ್ರಮ ಇದಾಗಿದ್ದು, ಕಳೆದ ಕೆಲ ದಿನಗಳ ಹಿಂದೆ ಕೆಲವು ಮಂದಿಯಲ್ಲಿ ಕಂಡು ಬಂದಿದ್ದ ಸೋಂಕು ಕಂಡುಬಂದಿತ್ತು. ಶನಿವಾರ ನಡೆಸಿದ ಸಾಮೂಹಿಕ ಪರೀಕ್ಷೆಯಲ್ಲಿ ಬಹುತೇಕ ಎಲ್ಲರಲ್ಲೂ ಸೋಂಕು ಪತ್ತೆಯಾಗಿದೆ.

ಸಿಯೋನ್ ಆಶ್ರಮದಲ್ಲಿ ಬಹುತೇಕ ವೃದ್ಧರು ಮತ್ತು ಮನೋರೋಗಿಗಳಿದ್ದಾರೆ. ಸೋಂಕಿತರನ್ನು ಕೊವೀಡ್ ಕೇರ್ ಸೆಂಟರ್‌ಗೆ ಸ್ಥಳಾಂತರ ಮಾಡಲು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಮುಂದಾಗಿದ್ದಾರೆ. 10ಕ್ಕೂ ಹೆಚ್ಚು ಅಂಬುಲೆನ್ಸ್ ಸ್ಥಳಾಂತರ ಮಾಡಲಾಗುತ್ತದೆ.
ಧರ್ಮಸ್ಥಳದ ರಜತಾದ್ರಿ ವಸತಿಗೃಹಕ್ಕೆ ಸೋಂಕಿತರು ಸ್ಥಳಾಂತರವಾಗಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ರಜತಾದ್ರಿ ವಸತಿ ಗೃಹ ಕೋವಿಡ್ ಕೇರ್ ಸೆಂಟರ್ ಆಗಿ ಬದಲಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿದೆ. ಶನಿವಾರದ ವರದಿಯಂತೆ 923 ಹೊಸ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 9345.












Click it and Unblock the Notifications