ಜನವರಿ 2ನೇ ವಾರದಿಂದ 5 ತಿಂಗಳು ಶಿರಾಡಿ ಘಾಟ್ ರಸ್ತೆ ಬಂದ್‌

ಮಂಗಳೂರು, ಡಿಸೆಂಬರ್ 21: ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜನವರಿ 2ನೇ ವಾರದಿಂದ ಐದು ತಿಂಗಳ ಕಾಲ ಈ ಮಾರ್ಗದಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಶಿರಾಡಿ ಘಾಟಿಯಲ್ಲಿ ಬಾಕಿ ಉಳಿದಿರುವ 12.38 ಕಿ.ಮೀ. ಉದ್ದದ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಜನವರಿ ಎರಡನೇ ವಾರದಿಂದ ಐದು ತಿಂಗಳ ಕಾಲ ಈ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ.

2nd phase road work: Shiradi Ghat road closed from January 2nd week

ಕಾಮಗಾರಿ ಕಾರಣದಿಂದ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸುವ ಸಂಬಂಧ ಮುಂದಿನ ವಾರ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಈ ಬಗ್ಗೆ ಈಗಾಗಲೇ ಇತ್ತೀಚೆಗೆ ನಡೆದ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+