ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಬೆತ್ತಲೆ ಫೋಟೋ ಹಾಕಿದ್ದ ಯುವಕರ ಸೆರೆ
ಮಂಗಳೂರು, ಜುಲೈ14: ಯುವತಿಯೊಬ್ಬಳ ನಗ್ನ ಚಿತ್ರವನ್ನು ರಹಸ್ಯವಾಗಿ ತೆಗೆದು, ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪದ ಮೇಲೆ ಮೂವರು ಯುವಕರನ್ನು ಉಪ್ಪಿನಂಗಡಿ ಪೋಲೀಸರು ಬಂದಿಸಿದ್ದಾರೆ. ಈ ಘಟನೆ ಕುರಿತು ಸಂತ್ರಸ್ತ ಯುವತಿ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಂದೇಶ್, ಜಗದೀಶ್ ಮತ್ತು ನವೀನ್ ಬಂಧಿತರು. ಆರೋಪಿ ಸಂದೇಶ್ ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಆತ ಯುವತಿಯನ್ನು ಪರಿಚಯ ಮಾಡಿಕೊಂಡು, ಆಕೆಯೊಂದಿಗೆ ಪ್ರೀತಿಯ ನಾಟಕವಾಡಿದ್ದಾನೆ. ಆ ನಂತರ ಪುಸಲಾಯಿಸಿ ರಹಸ್ಯವಾಗಿ ಯುವತಿಯ ನಗ್ನ ಚಿತ್ರಗಳನ್ನು ಸೆರೆ ಹಿಡಿದಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಗತಿ ಗೊತ್ತಾದ ಮೇಲೆ ಯುವತಿಯು ಸಂದೇಶ್ ನಿಂದ ದೂವಾಗಿದ್ದಳು. ಆದರೆ ಸಂದೇಶ್ ಆಕೆಯ ನಗ್ನ ಫೋಟೋಗಳನ್ನು ತನ್ನ ಸ್ನೇಹಿತರಾದ ಜಗದೀಶ್ ಮತ್ತು ನವೀನ್ ಗೆ ನೀಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ. ಫೋಟೋಗಳು ವೈರಲ್ ಆಗುತ್ತಿದ್ದಂತೆ ಸಂತ್ರಸ್ತ ಯುವತಿ ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ತನಿಖೆ ನಡೆಸಿದ ಪೊಲೀಸರು ಈ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
-
Asha Bhosle: ಸಂಗೀತ ಜಗತ್ತಿಗೆ ಆಶಾ ಭೋಸ್ಲೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications