ಪಿಗ್ಗಿ ಬ್ಯಾಂಕ್ನ ಹಣವನ್ನು ಬಡವರ ಚಿಕಿತ್ಸೆಗೆ ನೀಡಿದ ಪುತ್ತೂರಿನ ಬಾಲೆ
ಮಂಗಳೂರು, ಜುಲೈ 2: ಬಡವರ ಚಿಕಿತ್ಸೆಯ ಖರ್ಚಿಗೆ ತನ್ನ ಪಿಗ್ಗಿ ಬ್ಯಾಂಕ್ನ ಹಣವನ್ನು ಆಸ್ಪತ್ರೆಗೆ ನೀಡಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಪುಟ್ಟ ಬಾಲೆ ಮಾದರಿಯಾಗಿದ್ದಾಳೆ.
ಪುತ್ತೂರಿನ ವಿವೇಕಾನಂದ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ದಿಶಾ, ತನ್ನ ಪಿಗ್ಗಿ ಬ್ಯಾಂಕ್ನಲ್ಲಿ ತಾನು ಜತನದಿಂದ ಕಾಪಾಡಿಕೊಂಡು ಬಂದಿದ್ದ ಸುಮಾರು ಹತ್ತು ಸಾವಿರ ರೂಪಾಯಿಯನ್ನು ಆಸ್ಪತ್ರೆಗೆ ನೀಡಿದ್ದಾಳೆ.
ಪುತ್ತೂರಿನ ಖ್ಯಾತ ಸರ್ಜನ್ ಡಾ.ಎಂ.ಕೆ. ಪ್ರಸಾದ್ಗೆ ತನ್ನ ಪಿಗ್ಗಿ ಹಣ ನೀಡಿರುವ ದಿಶಾ, ಬಡವರ ಚಿಕಿತ್ಸಾ ವೆಚ್ಚಕ್ಕೆ ಭರಿಸುವಂತೆ ಮನವಿ ಮಾಡಿದ್ದಾಳೆ. ಪುತ್ತೂರಿನ ಡಾ.ಅನಿಲಾ ಮತ್ತು ದೀಪಕ್ ಶೆಟ್ಟಿ ದಂಪತಿಯ ಪುತ್ರಿಯಾಗಿರುವ ದಿಶಾ, ತನ್ನ ಹುಟ್ಟು ಹಬ್ಬವನ್ನೂ ಬಹಳ ಸರಳವಾಗಿ ಮಾಡುವಂತೆ ಹೆತ್ತವರಿಗೆ ತಿಳಿಸಿದ್ದಳು.

ಸದ್ಯ ಕೊರೊನಾ ಸೋಂಕು ಹಾಗೂ ಲಾಕ್ಡೌನ್ನಿಂದ ಬಡವರಿಗಾಗುತ್ತಿರುವ ಸಂಕಷ್ಟದ ಬಗ್ಗೆ ಮಾಧ್ಯಮಗಳಿಂದ ಅರಿತಿದ್ದಳು. ಇದರಿಂದ ತನ್ನ ಸ್ವಇಚ್ಛೆಯಿಂದಲೇ ತಾನೂ ಬಡವರಿಗೆ ಸಹಾಯ ಮಾಡಬೇಕೆಂದು ಹೆತ್ತವರಿಗೆ ಮನದ ಇಂಗಿತವನ್ನು ದಿಶಾ ಹೇಳಿದ್ದಳು.

ಮಗಳ ಆಸೆಯಂತೆಯೇ ಹೆತ್ತವರು ದಿಶಾ ಕೂಡಿಟ್ಟ ಹಣವನ್ನು ಬಡವರ ಚಿಕಿತ್ಸೆಯ ಖರ್ಚಿಗೆ ನೀಡಿದ್ದಾರೆ. ಪುತ್ತೂರಿನ ಪುಟ್ಟ ಬಾಲೆಯ ಹೃದಯ ವೈಶ್ಯಾಲತೆ ಎಲ್ಲರಿಗೂ ಮಾದರಿಯಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications