ಮಂಗಳೂರಿನ ಲಾಡ್ಜ್‌ನಲ್ಲಿ ಆತ್ಯಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು
ಮಂಗಳೂರು, ಮಾರ್ಚ್, 31: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್‌ನಲ್ಲಿ ನಡೆದಿದೆ.
ದೇವೇಂದ್ರ (48), ನಿರ್ಮಲಾ(48), ಚೈತ್ರಾ(09), ಚೈತನ್ಯ (09), ಆತ್ಮಹತ್ಯೆ ಶರಣಾದವರಾಗಿದ್ದಾರೆ. ಇವರು ಮೂಲತಃ ಮೈಸೂರಿನ ವಿಜಯನಗರ ಮೂಲದವರಾಗಿದ್ದು, ಸಾಲ ತೀರಿಸಲಾಗದೇ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆ ಮಾಡಿಕೊಂಡವರಲ್ಲಿ ಇಬ್ಬರು ಅವಳಿ ಹೆಣ್ಣುಮಕ್ಕಳು ಕೂಡ ಇದ್ದಾರೆ ಎನ್ನಲಾಗಿದೆ.

ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್‌ನಲ್ಲಿ ಬರೆದಿಟ್ಟಿರುವುದು ಇದೀಗ ಬಯಲಿಗೆ ಬಂದಿದೆ. ಈ ಕುಟುಂಬವು ಮಾರ್ಚ್ 27ರಂದು ಒಂದು ದಿನದ ಮಟ್ಟಿಗೆ ಲಡ್ಜ್‌ನಲ್ಲಿ ರೂಂ ಬುಕ್ ಮಾಡಿದ್ದು, ನಂತರ ಎರಡು ದಿನಕ್ಕೆ ವಿಸ್ತರಣೆ ಮಾಡಿಕೊಂಡಿದೆ.
ನಿನ್ನೆ ಸಂಜೆ (ಮಾರ್ಚ್ 30) ರೂಂ ಚೆಕ್ ಔಟ್ ಮಾಡಬೇಕಾಗಿತ್ತು. ಆದರೆ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಅಲ್ಲಿನ ಸಿಬ್ಬಂದಿ ಇಂದು ಬೆಳಗಿನ ಜಾವ ತಪಾಸಣೆ ನಡೆಸಿದ್ದು, ಆಗ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ನಾಲ್ವರು
ಇನ್ನು ನೀರಿನ ಟ್ಯಾಂಕ್ ಕಟ್ಟಲು ನಿರ್ಮಾಣ ಹಂತದ ಮನೆಯ ತಡೆಗೋಡೆ ಕೆಡವಿದ್ದರಿಂದ ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಳ್ಳಾರಿ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜೇಶ್, ಶೇಖಪ್ಪ, ಸುಶೀಲಮ್ಮ ಮತ್ತು ಜ್ಯೋತಿ ಎಂಬುವರು ಇದೀಗ ವಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಮ್ಮರಚೇಡು ಗ್ರಾಮ ಠಾಣಾ ಜಮೀನಿನಲ್ಲಿ ಇದ್ದ ನೀರಿನ ಟ್ಯಾಂಕ್ ಸೋರುತ್ತಿತ್ತು. ಆದ್ದರಿಂದ ಹೊಸದಾಗಿ ಟ್ಯಾಂಕ್ ಕಟ್ಟಲು ಹಳೆಯದನ್ನು ಕೆಡವಲಾಗಿತ್ತು. ಅದೇ ಜಾಗದಲ್ಲಿ ರಾಜೇಶ್, ಶೇಖಪ್ಪ ಅವರು ಮನೆಗೆ ನಿರ್ಮಿಸಿದ್ದ ತಡೆಗೋಡೆಯನ್ನು ಕೂಡ ಕೆಡವಲಾಗಿದೆ.
ತಹಶೀಲ್ದಾರ್ ಬಲರಾಂ ಕಟ್ಟಿಮನಿ ಸ್ಥಳಕ್ಕೆ ತೆರಳಿ, ತಡೆಗೋಡೆ ಕೆಡವಲು ಹೇಳಿದ್ದರು. ಮನೆ ಮಾಲೀಕರು ಅವರ ಮಾತು ಕೇಳದ್ದಿದ್ದರಿಂದ ಅಧಿಕಾರಿಗಳೇ ಪೊಲೀಸರ ಸಹಾಯದಿಂದ ಗೋಡೆಯನ್ನು ಕೆಡವಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇದೀಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಸಂಬಂಧ ಇನ್ನೂ ಯಾವುದೇ ದೂರು ದಾಖಲಾಗಿಲ್ಲ ಎಂದು ಇನ್ಸ್‌ಪೆಕ್ಟರ್ ನಿರಂಜನ್ ಕುಮಾರ್ ತಿಳಿಸಿದ್ದರು.
ಸಾವಿನ ಪ್ರಕರಣಕ್ಕೆ ಹೊಸ ತಿರುವು
ಇತ್ತೀಚೆಗಷ್ಟೇ ದಾವಣಗೆರೆ ಜಿಲ್ಲೆಯ ಎಸ್.ಎಸ್.ಲೇಔಟ್ ಎ ಬ್ಲಾಕ್ ರಿಂಗ್ ರಸ್ತೆ ಗುಡ್ ಹೋಮ್ಸ್ ಫರ್ನಿಚರ್ ಅಂಗಡಿ ಪಕ್ಕದ ಖಾಲಿ ನಿವೇಶನದಲ್ಲಿ ಹತ್ಯೆಗೀಡಾಗಿದ್ದ ವ್ಯಕ್ತಿಯ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿತ್ತು. ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಸತ್ಯ ಬೆಳಕಿಗೆ ಬಂದಿದೆ.
ಕೊಲೆ ಪ್ರಕರಣದ ಆರೋಪಿಗಳನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಮೃತನ ಹೆಂಡತಿ ಶ್ವೇತಾ ಹಾಗೂ ಆಕೆಯ ಪ್ರಿಯಕರ ಬುದ್ದಬಸವ ನಗರ ಹಗೆದಿಬ್ಬ ಸರ್ಕಲ್ ಹತ್ತಿರ ವಾಸವಿದ್ದ ಚಂದ್ರಶೇಖರ್ ಅಲಿಯಾಸ್ ಚಂದ್ರ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಬುದ್ಧ ಬಸವ ನಗರ ಹಗೇದಿಬ್ಬಾ ಸರ್ಕಲ್ ಹತ್ತಿರ ವಾಸವಿದ್ದ ಶ್ವೇತಾ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ತೂಲಾಕಿನ ಬೈಚವಳ್ಳಿ ಗ್ರಾಮದ ಮಹಾಂತೇಶ್ ಚೌರದ ಎಂಬಾತನ ಜೊತೆ ವಿವಾಹವಾಗಿತ್ತು. ಮದ್ಯವ್ಯಸನಿಯಾಗಿದ್ದ ಮಹಾಂತೇಶ್ ಹಾಗೂ ಶ್ವೇತ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿ ನಡವಳಿಕೆ ಬಗ್ಗೆ ಅನುಮಾನ ಹೊಂದಿದ್ದ ಮಹಾಂತೇಶ್ ಪತ್ನಿ ಜೊತೆಗೆ ನಿತ್ಯವೂ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ.
ಕೊಲೆ ಪ್ರಕರಣದ ಹಿನ್ನೆಲೆ
ಕಳೆದ 23 ರಂದು ಸುಮಾರು 35 ವರ್ಷದ ವ್ಯಕ್ತಿಯನ್ನು ಯಾರೋ ದುಷ್ಮರ್ಮಿಗಳು ಕಲ್ಲು ಎತ್ತಿ ಹಾಕಿ ಹೋಗಿದ್ದಾರೆ ಎಂದು ಸಾರ್ವಜನಿಕರಿಂದ ಹೊಯ್ಸಳ- 4ಕ್ಕೆ ದೂರು ಬಂದಿತ್ತು. ಕೂಡಲೇ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಬಂದಾಗ ಆತ ಇನ್ನು ಜೀವಂತವಿದ್ದ. ಸಾವು ಬದುಕಿನ ಮಧ್ಯ ಹೋರಾಟ ನಡೆಸುತ್ತಿದ್ದ ಆತನನ್ನು ಕೂಡಲೇ ಆಂಬ್ಯುಲೆನ್ಸ್ ನಲ್ಲಿ ಸಿ.ಜಿ ಆಸ್ಪತ್ರೆಗೆ ಕರೆತರಲಾಯಿತು. ಸಿ. ಜೆ. ಆಸ್ಪತ್ರೆಯ ವೈದ್ಯರು ಪರೀಕ್ಷಿಸಿದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ದೃಢೀಕರಿಸಿದ್ದರು. ಬಳಿಕ ಈ ಸಂಬಂಧ ಹೊಯ್ಸಳ ಸಿಬ್ಬಂದಿ ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.
ಮೃತನ ಹೆಸರು, ವಿಳಾಸ ಹಾಗೂ ಕೊಲೆ ಮಾಡಿದ ಆರೋಪಿತರನ್ನು ಪತ್ತೆ ಮಾಡಲು ದಾವಣಗೆರೆ ನಗರ ಉಪ ವಿಭಾಗದ ಡಿವೈಎಸ್‌ಪಿ ಮಲ್ಲೇಶ್ ದೊಡ್ಡಮನಿ ಹಾಗೂ ಡಿ.ಸಿ.ಆರ್.ಬಿ ಡಿವೈಎಸ್‌ಪಿ ಸೈಯದ್ ರೋಷನ್ ಜಮೀರ್ ಎಸ್. ಮಾರ್ಗದರ್ಶನದಲ್ಲಿ ವಿದ್ಯಾನಗರ ಪೊಲೀಸ್ ಇನ್ ಸ್ಪೆಕ್ಟರ್ ಪ್ರಭಾವತಿ ಸಿ. ಶೇತಸನದಿ ನೇತೃತ್ವದಲ್ಲಿ ಡಿ.ಸಿ.ಆರ್.ಬಿ. ವಿಭಾಗದ ಸಿಬ್ಬಂದಿ ಹಾಗೂ ವಿದ್ಯಾನಗರ ಪೊಲೀಸ್ ಠಾಣೆ ಸಿಬ್ಬಂದಿಯನ್ನೊಳಗೊಂಡ ತಂಡ ರಚಿಸಲಾಗಿತ್ತು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications