SSLC ಫಲಿತಾಂಶ:ದಕ್ಷಿಣ ಕನ್ನಡದ ನಾಲ್ವರು ವಿದ್ಯಾರ್ಥಿನಿಯರಿಗೆ 624 ಅಂಕ

ಮಂಗಳೂರು, ಏಪ್ರಿಲ್ 30: 2019ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಬುಧವಾರ (ಮೇ 1) ರಾಜ್ಯದ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

ಇಂದು ಮಂಗಳವಾರ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾ ಶಂಕರ್, ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.

ಸದ್ಯ ಎಸ್ಎಸ್ಎಲ್ ಸಿ ಫಲಿತಾಂಶ ಆನ್‌ಲೈನ್ ಮೂಲಕ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 4 ಮಂದಿ ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್ ಗಳಾಗಿದ್ದಾರೆ.

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ವಿದ್ಯಾರ್ಥಿನಿಯರು 624 ಅಂಕ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸಿಂಚನಾ ಲಕ್ಷ್ಮಿ, ಅನುಪಮಾ ಕಾಮತ್, ಕೃಪಾ ಕೆ.ಆರ್., ಚಿನ್ಮಯಿ ಅವರಿಗೆ 625 ರಲ್ಲಿ 624 ಅಂಕ ಪಡೆದಿದ್ದಾರೆ.

4 students of Dakshina Kannada scored 624 in SSLC

ಸಿಂಚನಾ ಪುತ್ತೂರಿನ ವಿವೇಕಾನಂದ ಹೈಸ್ಕೂಲ್ ವಿದ್ಯಾರ್ಥಿನಿಯಾಗಿದ್ದು, ಕೃಪಾ ಸುಳ್ಯ ಕುಮಾರಸ್ವಾಮಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ನ ವಿದ್ಯಾರ್ಥಿನಿ. ಅನುಪಮಾ ಬಂಟ್ವಾಳ ಎಸ್ ವಿಎಸ್ ಹೈಸ್ಕೂಲ್ ವಿದ್ಯಾರ್ಥಿನಿಯಾಗಿದ್ದು , ಚಿನ್ಮಯಿ ವಿಟ್ಲ ಜೇಸಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ವಿದ್ಯಾರ್ಥಿನಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+