ಮಂಗಳೂರು: ಮುತ್ತೂಟ್ ಫೈನಾನ್ಸ್ ನಲ್ಲಿ ದರೋಡೆಗೆ ಯತ್ನ

ಮಂಗಳೂರು, ಡಿಸೆಂಬರ್, 05: ಮುತ್ತೂಟ್ಟು ಫೈನಾನ್ಸ್ ಸಂಸ್ಥೆಯ ಮೇಲೆ ಐವರು ದುಷ್ಕರ್ಮಿಗಳ ತಂಡ ದರೋಡೆ ನಡೆಸಲು ಯತ್ನಿಸಿ ಪರಾರಿಯಾದ ಘಟನೆ ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಗಳೂರಲ್ಲಿ ನಡೆದಿದೆ.

ಮಂಗಳೂರಿನ ಕುಳಾಯಿ ಜಂಕ್ಷನ್ ಬಳಿಯ ಮುತ್ತೂಟ್ಟು ಫೈನಾನ್ಸ್ ಶಾಖೆಯಲ್ಲಿ ಈ ಕೃತ್ಯ ಸಂಭವಿಸಿದ್ದು, ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಹಣ ದೋಚಲು ಪ್ರಯತ್ನಿಸಿದ್ದಾರೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[ಮಂಗಳೂರಲ್ಲಿ ಬ್ಯಾಂಕ್ ದರೋಡೆ, 5 ಕೋಟಿ ಲೂಟಿ]

5 criminals attempt to looted money from Muthoot Finance branch in Mangaluru

ಏನಿದು ಘಟನೆ?

ಸುಮಾರು ಆರು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುತ್ತೂಟ್ಟು ಫೈನಾನ್ಸ್ ಗೆ 9 ಗಂಟೆ ಸುಮಾರಿನಲ್ಲಿ ಐವರು ಮುಸುಕುದಾರಿಗಳು ಓಮಿನಿ ಕಾರಿನಲ್ಲಿ ಬಂದಿದ್ದಾರೆ. ಬಳಿಕ ಅದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಹಣ ಕದಿಯಲು ಪ್ರಯತ್ನಿಸಿದ್ದಾರೆ.

ಕಳ್ಳತನ ಮಾಡುವ ಸಂದರ್ಭದಲ್ಲಿ ಅಚಾನಕ್ಕಾಗಿ ಪೊಲೀಸ್ ವಾಹನದ ಸೈರನ್ ಶಬ್ದ ಕೇಳಿಸಿದೆ. ಈ ಶಬ್ದ ಆಲಿಸಿ ಭಯಭೀತರಾದ ದುಷ್ಕರ್ಮಿಗಳು ಪೊಲೀಸರು ಬಂದರೆಂದು ತಿಳಿದು ತಕ್ಷಣವೇ ಅಲ್ಲಿಂದ ಓಡಿ ಹೋಗಿದ್ದು, ಹಣ ಕದಿಯಲು ಸಾಧ್ಯವಾಗಿಲ್ಲ.[ಈ ಊರಲ್ಲಿ ಇರೋರೆಲ್ಲಾ ಮನೇಲಿ ತರಬೇತಿ ಪಡೆದ ಖತರ್ನಾಕ್ ಕಳ್ಳರು!]

ಈ ವಿಚಾರ ತಿಳಿದ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ವಿಚಾರಣೆಗೆ ಸಹಕಾರ ನೀಡುತ್ತಿದ್ದಾರೆ. ಸದ್ಯದಲ್ಲೇ ದರೋಡೆಕೋರರನ್ನು ಪತ್ತೆ ಹಚ್ಚುವುದಾಗಿ ಪೊಲೀಸರು ಮಾಲೀಕರಿಗೆ ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+