ಶೋಕಿ ಜೀವನಕ್ಕಾಗಿ ದರೋಡೆ ಕೃತ್ಯಕ್ಕೆ ಇಳಿದಿದ್ದ ಐವರ ಬಂಧನ
ಮಂಗಳೂರು, ಫೆಬ್ರವರಿ 28: ಶೋಕಿ ಜೀವನ ನಡೆಸಲು ದರೋಡೆ ಕೃತ್ಯಕ್ಕೆ ಇಳಿದಿದ್ದ ಐವರನ್ನು ಬಂಧಿಸಲಾಗಿದೆ. ಈ ಅಂತಾರಾಜ್ಯ ದರೋಡೆಕೋರರನ್ನು ಉಳ್ಳಾಲ ಠಾಣಾ ಪೊಲೀಸರು ಹಾಗೂ ರೌಡಿ ನಿಗ್ರಹ ದಳದ ಸಿಬ್ಬಂದಿ ಬಂಧಿಸಿದ್ದಾರೆ.
ಬಂಧಿತರನ್ನು ಕೇರಳದ ತ್ರಿಶ್ಶೂರ್ ನ ಮೊಹಮ್ಮದ್ ಫಾಝಿಲ್ (24), ಮೊಹಮ್ಮದ್ ಶರೀಫ್ (25), ಅನಾಸ್ (21), ಸಲೀಂ (30) ಹಾಗೂ ಜಿ. ಸುಜಿತ್ (24) ಎಂದು ಗುರುತಿಸಲಾಗಿದೆ. ಬಂಧಿತರು ಮಂಗಳೂರು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿಯಲ್ಲಿ ದರೋಡೆ ನಡೆಸಲು ಸಂಚು ರೂಪಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತರು ವ್ಯಾಗನಾರ್ ಕಾರಿನ ನಂಬರ್ ಪ್ಲೇಟ್ ಬದಲಾಯಿಸಿದ್ದು, ಮಾರಕಾಸ್ತ್ರಗಳನ್ನು ಇರಿಸಿಕೊಂಡು ದರೋಡೆ ನಡೆಸಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳಿಂದ 4 ಲಕ್ಷ ರೂಪಾಯಿ ಮೌಲ್ಯದ ಸ್ವತ್ತು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.












Click it and Unblock the Notifications