ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡೆಂಗ್ಯೂನಿಂದ ಮೃತಪಟ್ಟ ಸುದ್ದಿ ವಾಹಿನಿ ಛಾಯಾಗ್ರಾಹನ ಕುಟುಂಬಕ್ಕೆ 5 ಲಕ್ಷ ಪರಿಹಾರ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಆಗಸ್ಟ್ 13: ಇತ್ತೀಚೆಗೆ ಡೆಂಗ್ಯೂ ಜ್ವರದಿಂದ ಮೃತಪಟ್ಟ ನ್ಯೂಸ್ ಚಾನಲ್ ನ ಛಾಯಾಗ್ರಾಹಕ ನಾಗೇಶ್ ಪಡು ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ರಾಜ್ಯ ಸರಕಾರದ ವತಿಯಿಂದ 5 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ.

ಡೆಂಗ್ಯೂ; ಚಿಕಿತ್ಸೆ ಫಲಿಸದೆ ಮಂಗಳೂರಿನಲ್ಲಿ ಪತ್ರಕರ್ತ ಸಾವುಡೆಂಗ್ಯೂ; ಚಿಕಿತ್ಸೆ ಫಲಿಸದೆ ಮಂಗಳೂರಿನಲ್ಲಿ ಪತ್ರಕರ್ತ ಸಾವು

ಆಗಸ್ಟ್ 12ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರ ಬಳಿ ನಾಗೇಶ್ ಪಡು ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿತ್ತು.

5 Lakhs Compensation To TV Cameraman Nagesh Family From State Government

ಈ ಕುರಿತು ಪರಿಶೀಲನೆ ನಡೆಸಿದ ಯಡಿಯೂರಪ್ಪ, ತಕ್ಷಣವೇ ಸ್ಪಂದಿಸಿ ರಾಜ್ಯ ಸರಕಾರದ ವತಿಯಿಂದ 5 ಲಕ್ಷ ರುಪಾಯಿ ಪರಿಹಾರ ಘೋಷಿಸಿದರು. ಈ ವೇಳೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು ಇದ್ದರು.

English summary
Nagesh Padu, tv channel cameraman who died recently due to dengue fever. On August 12th state government announced 5 lakhs compensation to Nagesh family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X