ನಾವೂರ ನದಿಯಲ್ಲಿ ಅಪಾಯಕ್ಕೆ ಸಿಲುಕಿದ ಮಕ್ಕಳು, ಅದೃಷ್ಟವಶಾತ್ ಪಾರು!
ಮಂಗಳೂರು, ಅಕ್ಟೋಬರ್. 24: ನದಿಯಲ್ಲಿ ನೀರಾಟ ಆಡಲು ತೆರಳಿದ್ದ ವಿದ್ಯಾರ್ಥಿಗಳು ನೀರಿನ ಸೆಳೆತ ಹೆಚ್ಚಾದ ಕಾರಣ ಅಪಾಯಕ್ಕೆ ಸಿಲುಕಿದ ಘಟನೆ ಬಂಟ್ವಾಳದ ಬಳಿ ನಡೆದಿದೆ.
ಇಂದು ಬುಧವಾರ ವಾಲ್ಮಿಕಿ ಜಯಂತಿ ಪ್ರಯುಕ್ತ ಶಾಲೆಗೆ ರಜೆಯಿದ್ದ ಕಾರಣ ನಾವೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವೂರ ಲಕ್ಷ್ಮೀ ವಿಷ್ಣು ಮೂರ್ತಿ ದೇವಸ್ಥಾನದ ಸಮೀಪವಿರುವ ನೇತ್ರಾವತಿ ನದಿಯಲ್ಲಿ 11 ಮಂದಿ ವಿದ್ಯಾರ್ಥಿಗಳ ತಂಡ ಆಟವಾಡಲು ತೆರಳಿತ್ತು.
ಆಟವಾಡಲು ತೆರಳಿದ್ದ ವೇಳೆ ಪಕ್ಕದ ಎಎಂ ಆರ್ ಡ್ಯಾಂನಿಂದ ನೀರು ಬಿಟ್ಟ ಪರಿಣಾಮ ಐವರು ವಿದ್ಯಾರ್ಥಿಗಳು ಅಪಾಯದಲ್ಲಿ ಸಿಲುಕಿದರು. ಈಜಲು ಸಾಧ್ಯವಾಗದೇ ನೀರಿನ ರಭಸಕ್ಕೆ ಬಂಡೆಕಲ್ಲಿನ ಮೇಲೆ ಸಿಲುಕಿಕೊಂಡರು.

ಈ ವೇಳೆ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ನೀರನ್ನು ಹೊರಬಿಡಲಾಗಿದೆ. ಡ್ಯಾಂ ನಿಂದ ನೀರು ಹೊರ ಬಿಡುವ ವೇಳೆ ಸೈರನ್ ಮೊಳಗುತ್ತದೆ. ಆದರೆ ಸೈರನ್ ಶಬ್ದವನ್ನು ವಿದ್ಯಾರ್ಥಿಗಳು ಕೇಳಿಸಿಕೊಂಡಿರಲಿಲ್ಲ ಎಂದು ಹೇಳಲಾಗಿದೆ.
ನೀರಿನ ರಭಸ ಹಾಗೂ ಏಕಾಏಕಿ ನೀರಿನ ಮಟ್ಟ ಏರಿಕೆಯಾಗುವುದನ್ನು ಕಂಡ 11 ಮಂದಿ ವಿದ್ಯಾರ್ಥಿಗಳ ಪೈಕಿ 6 ಮಂದಿ ವಿದ್ಯಾರ್ಥಿಗಳು ಈಜಿ ದಡ ಸೇರಿದ್ದಾರೆ. ಉಳಿದ 5 ವಿದ್ಯಾರ್ಥಿಗಳು ಈಜಲು ಸಾಧ್ಯವಾಗದೇ ನದಿಯ ನಡುವೆ ಇರುವ ದೊಡ್ಡ ಬಂಡೆಕಲ್ಲನ್ನು ಹತ್ತಿದ್ದಾರೆ.

ನದಿಯ ಇನ್ನೊಂದು ಬದಿಯಲ್ಲಿದ್ದ ವಿದ್ಯಾರ್ಥಿಗಳು ಸಹಾಯಕ್ಕಾಗಿ ಬೊಬ್ಬೆ ಹಾಕಿ ಕಿರುಚಾಡಿದ್ದಾರೆ. ಮಕ್ಕಳ ಕಿರಿಚಾಟ ಕೇಳಿದ ತಕ್ಷಣ ಇಲ್ಲಿನ ಸ್ಥಳೀಯ ಯುವಕರ ತಂಡ ಸಹಾಯಕ್ಕೆ ಧಾವಿಸಿದೆ. ಯುವಕರ ತಂಡ ನದಿಗೆ ಧುಮುಕಿ ಹಗ್ಗದ ಮೂಲಕ ಅಪಾಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications