ಗೋವುಗಳ ಅಕ್ರಮ ಸಾಗಾಟ, ಹಲ್ಲೆ ಪ್ರಕರಣ; 6 ಜನರ ಬಂಧನ

ಮಂಗಳೂರು, ಜೂನ್ 29: ಗೋವುಗಳ ಅಕ್ರಮ ಸಾಗಾಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹಾಗೂ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಗೋವುಗಳ ಅಕ್ರಮ ಸಾಗಾಟ ಪ್ರಕರಣದಲ್ಲಿ ವಾಹನ ಚಾಲಕ ಬೆಳಾಲು ನಿವಾಸಿ ಹೊನ್ನಪ್ಪ ಗೌಡ, ಮೊಗ್ರು ಗ್ರಾಮದ ಮಾಪಲ ಮನೆಯ ಉಸ್ಮಾನ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಮೇಲೆ ಹಲ್ಲೆ ನಡೆಸಿದ ಹಿಂದೂ ಸಂಘಟನೆಯ ನಾಲ್ವರು ಕಾರ್ಯಕರ್ತರನ್ನೂ ಬಂಧಿಸಿದ್ದು, ಬಂಧಿತರನ್ನು ಮೈರೋಲ್ತಡ್ಕ ನಿವಾಸಿ ಸಂತೋಷ್ ಪೂಜಾರಿ (30), ಕಣಿಯೂರು ಗ್ರಾಮದವರಾದ ಧನರಾಜ್ (21), ಲತೀಶ (20) ಹಾಗೂ ಶರತ್ (19) ಎಂದು ಗುರುತಿಸಲಾಗಿದೆ.

6 arrested in Illegal cattle transport and assault case

ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂದು ಆರೋಪಿಸಿ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಮೊಗ್ರು ಜಂಕ್ಷನ್ ನಲ್ಲಿ ವಾಹನವೊಂದನ್ನು ತಡೆದು ನಿಲ್ಲಿಸಿ ವಾಹನದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+