ಮಂಗಳೂರು; ಕೋವಿಡ್ಗೆ ಆರು ತಿಂಗಳ ಗರ್ಭಿಣಿ ವೈದ್ಯೆ ಬಲಿ
ಮಂಗಳೂರು, ಏಪ್ರಿಲ್ 28; ರಾಜ್ಯದಲ್ಲಿ ಕೊರೊನಾ ತಾಂಡವವಾಡುತ್ತಿದೆ. ಬಡವ, ಶ್ರೀಮಂತರೆನ್ನದೆ ಎಲ್ಲರ ಬಾಳಿನಲ್ಲೂ ಕಣ್ಣೀರ ಕೋಡಿ ಹರಿಸುತ್ತಿದೆ. ಮಂಗಳೂರಿನಲ್ಲಿ ಕೋವಿಡ್ ಭೀಕರತೆ ಮೆರೆದಿದ್ದು, ಆರು ತಿಂಗಳ ಗರ್ಭಿಣಿ ವೈದ್ಯೆ ಬಲಿಯಾಗಿದ್ದಾರೆ.
ಮಂಗಳೂರಿನ ಕಣಚೂರು ಆಸ್ಪತ್ರೆಯ ವೈದ್ಯೆ ಡಾ. ಮಾಬಷಿರಾ (26) ಕೋವಿಡ್ನಿಂದಾಗಿ ಮೃತಪಟ್ಟಿದ್ದಾರೆ. ಕೇರಳದ ತಲಶೇರಿ ಮೂಲದ ನಿವಾಸಿ ಮಾಬಷೀರಾ, ಮಂಗಳೂರಿನ ಕಣಚೂರಿನ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ಈಕೆಯ ಪತಿ ಡಾ. ಮಹಾಶವಾಫರ್ ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ವೈದ್ಯರು.
ಮಾಬಷೀರಾ ಅವರು ಕಣಚೂರು ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ವೈದ್ಯೆಗೆ ಸೋಂಕು ತಗುಲಿದ್ದು, ಪತಿ ಕೆಲಸ ಮಾಡುತ್ತಿದ್ದ ಇಂಡಿಯಾನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದರೆಡು ದಿನಗಳಿಂದ ಆಸ್ಪತ್ರೆಯಲ್ಲಿ ಮಾಬಷೀರಾಗೆ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿಲ್ಲ.

ಮಾಬಷೀರಾ ಅವರು ಆರು ತಿಂಗಳ ಗರ್ಭಿಣಿಯಾಗಿದ್ದು, ಗರ್ಭಿಣಿಯಾಗಿದ್ದರೂ ರೋಗಿಗಳಿಗೆ ನೀಡುತ್ತಿದ್ದ ಸೇವೆಯನ್ನು ಮುಂದುವರೆಸಿದ್ದರು. ರೋಗಿಗಳ ಆರೈಕೆ ಮಾಡುತ್ತಾ ಅವರಿಗೆ ಕೋವಿಡ್ ಸೋಂಕು ತಗುಲಿದೆ.
ವೈದ್ಯೆಯ ಜೊತೆಗೆ ಇಡೀ ಕುಟುಂಬಕ್ಕೆ ಕೊರೊನಾ ಸೋಂಕು ಆವರಿಸಿದ್ದು ಎಲ್ಲರಿಗೂ ಪಾಸಿಟಿವ್ ಕಂಡು ಬಂದಿತ್ತು. ಎಲ್ಲರೂ ಗುಣಮುಖರಾಗುತ್ತಿರೂ ಮಾಬಷೀರಾ ಆರೋಗ್ಯ ಮಾತ್ರ ಸುಧಾರಿಸಲಿಲ್ಲ. ಕೊರೊನಾ ವೈದ್ಯೆಯ ಜೊತೆಗೆ ಲೋಕ ಕಾಣಬೇಕಾಗಿದ್ದ ಮಗುವನ್ನು ಕೂಡಾ ಬಲಿ ಪಡೆದಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications