• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆದ್ರಾಳದಲ್ಲಿ ಪುಟ್ಟ ಬಾಲಕಿ ಸಾವು, ವೈದ್ಯರ ವಿರುದ್ಧ ಆರೋಪ ಮಾಡಿದ ಹೆತ್ತವರು

|

ಮಂಗಳೂರು, ನವೆಂಬರ್. 20:ಮೈ ಮೇಲೆ ಬಿಸಿ ನೀರು ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪುಟ್ಟ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಆಘಾತಕಾರಿ ಘಟನೆ ಪುತ್ತೂರಿನ ಬೆದ್ರಾಳ ಎಂಬಲ್ಲಿ ನಡೆದಿದೆ. ಇಲ್ಲಿನ ಸಾಂದೀಪನಿ ಶಾಲೆಯ ಒಂದನೇ ತರಗತಿ ಬಾಲಕಿ ತನ್ವಿ ಸಾವಿಗೀಡಾದ ಬಾಲಕಿ.

ಅನ್ನದಾನ ಮಾಡ್ತಾರೆ, ಮಗ್ಗಿ ಪುಸ್ತಕವನ್ನೂ ಕೊಡ್ತಾರೆ ಈ ವೈದ್ಯ

ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿಸಿ ನೀರು ತನ್ವಿ ಮೈ ಮೇಲೆ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆಸ್ಪತ್ರೆಯ ವೈದ್ಯರು ಬಾಲಕಿಯ ದೇಹದ ತುಂಬಾ ಬಟ್ಟೆ ಸುತ್ತಿ ಚಿಕಿತ್ಸೆ ನೀಡುತ್ತಿದ್ದರು.

ಸರ್ಕಾರಿ ವೈದ್ಯ ಸಿಬ್ಬಂದಿ ಬೇಡಿಕೆ ಈಡೇರಿಸಲು ಸಿದ್ಧ: ಕುಮಾರಸ್ವಾಮಿ

ಆದರೆ ಆಕೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬರದ ಕಾರಣ ಆಸ್ಪತ್ರೆಯ ವೈದ್ಯರು ನಾಲ್ಕು ದಿನದ ಬಳಿಕ ನಿನ್ನೆ ರಾತ್ರಿ ಹೆಚ್ಚಿನ ತುರ್ತು ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವಂತೆ ಸೂಚನೆ ನೀಡಿದ್ದರು. ಆದರೆ ಮಾರ್ಗ ಮಧ್ಯೆಯೇ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ.

ಇದೆಂಥ ಆಸ್ಪತ್ರೆ? ಹೊಲಿಗೆ ಹಾಕೋನು ಜವಾನ, ನಿಂತು ನೋಡೋನು ವೈದ್ಯ!

ಸುಟ್ಟು ಹೋದ ಶರೀರಕ್ಕೆ ಬಟ್ಟೆ ಸುತ್ತಿ ನಾಲ್ಕು ದಿನ ಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ ಇದೀಗ ಮೃತ ಬಾಲಕಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಈ‌ ಸಾವು ಸಂಭವಿಸಿದೆ ಎನ್ನುವ ಆರೋಪವೂ ಮೃತ ಬಾಲಕಿಯ ಸಂಬಂಧಿಕರು ಮಾಡಿದ್ದಾರೆ.

English summary
In a shocking incident a 6 year young girl breathed her last as boiling water fell uopn her in Bedrala near Puttur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X