• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಕ್ಷಿಣ ಕನ್ನಡ; 20 ದಿನದಲ್ಲಿ 627 ವಿದ್ಯಾರ್ಥಿಗಳಿಗೆ ಕೋವಿಡ್!

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಆಗಸ್ಟ್ 26; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲೆಗಳು ಪುನರಾರಂಭವಾದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಕಳೆದ 20 ದಿನಗಳಲ್ಲಿ ಜಿಲ್ಲೆಯಲ್ಲಿ 630 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಕರ್ನಾಟಕದಲ್ಲಿ ಬೆಂಗಳೂರು ಬಿಟ್ಟರೆ ಅತಿ ಹೆಚ್ಚು ಸೋಂಕು ದಕ್ಷಿಣ ಕನ್ನಡದಲ್ಲಿ ಪತ್ತೆಯಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲೇಜುಗಳು ಆರಂಭವಾದ ಬಳಿಕ ಜಿಲ್ಲಾ ಆರೋಗ್ಯ ಇಲಾಖೆ ನಡೆಸಿದ ವಿದ್ಯಾರ್ಥಿಗಳ ಕೊರೊನಾ ಪರೀಕ್ಷೆಯಲ್ಲಿ ಆತಂಕಕಾರಿ ವಿಚಾರ ಬಯಲಾಗಿದೆ. ಜಿಲ್ಲೆಯಲ್ಲಿ ಒಟ್ಟು 630 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಇವರಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗಿಂತ ಹೊರ ಜಿಲ್ಲೆ, ಹೊರ ರಾಜ್ಯಗಳ ವಿದ್ಯಾರ್ಥಿಗಳ ಸಂಖ್ಯೆಯೇ ಅಧಿಕವಾಗಿದೆ.

ಮಂಗಳೂರು: ಕೊರೊನಾ ಸೋಂಕಿಗೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣುಮಂಗಳೂರು: ಕೊರೊನಾ ಸೋಂಕಿಗೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು

ಜಿಲ್ಲೆಯಲ್ಲಿ ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿರುವ ಮಹಾರಾಷ್ಟ್ರ, ಕೇರಳ, ಉಡುಪಿ, ಹೊರ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಂಡು ಬಂದಿದೆ. ಇವರೆಲ್ಲರೂ ಜಿಲ್ಲೆಗೆ ಪರೀಕ್ಷೆ ಬರೆಯಲು ಆಗಮಿಸಿದ್ದರು. ಇವರಲ್ಲಿ ಕೆಲವರು ಆರ್‌ಟಿಪಿಸಿಆರ್ ತಪಾಸಣೆಯ ನೆಗೆಟಿವ್ ವರದಿ ತಂದಿದ್ದರೂ, ಇಲ್ಲಿ ಮತ್ತೆ ತಪಾಸಣೆ ನಡೆಸಿದಾಗ ಪಾಸಿಟಿವ್ ವರದಿ ಬಂದಿದೆ.

ಮಂಗಳೂರು; ಅದ್ಧೂರಿ ಕಾರ್ಯಕ್ರಮ, ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಂಗಳೂರು; ಅದ್ಧೂರಿ ಕಾರ್ಯಕ್ರಮ, ಕೋವಿಡ್ ಮಾರ್ಗಸೂಚಿ ಉಲ್ಲಂಘನೆ

320 Students Tested Positive For Covid In 20 Days At Dakshina Kannada

ಕಳೆದ 20 ದಿನಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 29 ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳ 900ಕ್ಕೂ ಅಧಿಕ ವಿದ್ಯಾರ್ಥಿಗಳ ತಪಾಸಣೆ ನಡೆಸಲಾಗಿತ್ತು‌. ಇವರಲ್ಲಿ 630 ಮಂದಿಯಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಇವರಲ್ಲಿ ಕೇರಳದ 320 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಕಂಡು ಬಂದಿದೆ.

2ನೇ ಡೋಸ್ ಲಸಿಕೆ ಪಡೆಯಲು ಕೋವಿಡ್ ಪರೀಕ್ಷೆ; ಏನಿದು ವಿವಾದ? 2ನೇ ಡೋಸ್ ಲಸಿಕೆ ಪಡೆಯಲು ಕೋವಿಡ್ ಪರೀಕ್ಷೆ; ಏನಿದು ವಿವಾದ?

ಸದ್ಯ ಈ ವಿದ್ಯಾರ್ಥಿಗಳನ್ನು ಕಾಲೇಜಿನ ಹಾಸ್ಟೆಲ್, ಫ್ಲ್ಯಾಟ್‌ಗಳಲ್ಲಿ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿದೆ. ಹಾಸ್ಟೆಲ್‌ನಲ್ಲಿ ವಾಸವಿರುವ ಅನೇಕ ವಿದ್ಯಾರ್ಥಿಗಳಲ್ಲಿ ಸೋಂಕು ತಗುಲಿದ ಮಾಹಿತಿಯಿದ್ದು, ಹಾಸ್ಟೆಲ್‌ಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗಿದೆ. ಕಾಲೇಜುಗಳಲ್ಲಿ ಕ್ವಾರೆಂಟೈನ್‌ಗೆ ಸೂಕ್ತ ವ್ಯವಸ್ಥೆ ಇಲ್ಲದಿದ್ದರೆ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.

ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು ನೆಗೆಟಿವ್ ಸರ್ಟಿಫಿಕೇಟ್ ತಂದರೂ, 7 ದಿನ ಕಡ್ಡಾಯವಾಗಿ ಕ್ವಾರೆಂಟೈನ್‌ನಲ್ಲಿ ಇರಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ. ಹೀಗೆ ಕ್ವಾರೆಂಟೈನ್ ಅವಧಿ ಪೂರೈಸಿದ ವಿದ್ಯಾರ್ಥಿಗಳನ್ನು ಮತ್ತೆ ಕೊರೊನಾ ಪರೀಕ್ಷೆ ಮಾಡಿದಾಗ ಪಾಸಿಟಿವ್ ವರದಿ ಪತ್ತೆಯಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ.

ವಿದ್ಯಾರ್ಥಿಗಳು ಬರುವಾಗ ಫೇಕ್ ಸರ್ಟಿಫಿಕೇಟ್ ತರುವ ಬಗ್ಗೆಯೂ ಸಂಶಯ ವ್ಯಕ್ತವಾಗಿದೆ. ಹೀಗಾಗಿ ಕಾಲೇಜುಗಳಿಗೆ ಜಿಲ್ಲಾಡಳಿತ ಖಡಕ್ ಎಚ್ಚರಿಕೆ ನೀಡಿದೆ. ಸೋಂಕು ಜಾಸ್ತಿ ಇರುವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೊರೊನಾ ನಿಯಮ ಮೀರುತ್ತಿರುವುದರಿಂದ ಸೋಂಕು ಹೆಚ್ಚಳವಾಗುತ್ತಿದೆ. ಸೋಂಕು ಹೆಚ್ಚಳವಾದರೆ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ಕಾಲೇಜುಗಳನ್ನು ತೆರೆಯುವ ಬಗ್ಗೆ ಜಿಲ್ಲಾಡಳಿತ ನಿರ್ಧಾರ ಮಾಡುತ್ತಿದೆ. ಆದರೆ ಸದ್ಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಾಲೇಜುಗಳನ್ನು ಆರಂಭಿಸುವುದು ಸವಾಲಿನ ಕೆಲಸವಾಗಿದೆ. ಕರ್ನಾಟಕದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸಿಗದಿರುವುದು ಆತಂಕ ಮೂಡಿಸಿದೆ.

ಬುಧವಾರದ ಹೆಲ್ತ್ ಬುಲೆಟಿನ್‌ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 217 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ, 6 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2780.

English summary
In Dakshina Kannada district 627 students tested positive for Covid 19 in 20 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X