ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಅಪರಾಧ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಗ್ಯಾಂಗ್ ನ 8 ಜನರ ಬಂಧನ

|
Google Oneindia Kannada News

ಮಂಗಳೂರು ಆಗಸ್ಟ್ 17: ಕೇಂದ್ರೀಯ ತನಿಖಾ ಸಂಸ್ಥೆಯ ನೇಮ್ ಬೋರ್ಡ್ ಅಳವಡಿಸಿರುವ ಕಾರನ್ನು ಬಳಸಿಕೊಂಡು ದೊಡ್ಡ ಮಟ್ಟದ ಅಪರಾಧ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ 8 ಮಂದಿ ಆರೋಪಿಗಳನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸ್ಯಾಮ್ ಪೀಟರ್, ಟಿ.ಕೆ ಬೋಪಣ್ಣ, ಮದನ್, ಚಿನ್ನಪ್ಪ, ಸುನೀಲ್ ರಾಜು, ಕೋದಂಡರಾಮ, ಜಿ.ಮೊಯದ್ದೀನ್, ಎಸ್ ಎ ಕೆ ಲತೀಫ್ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಿಸ್ತೂಲು, ಸಜೀವ ಗುಂಡುಗಳು ಸೇರಿದಂತೆ ಕೃತ್ಯಕ್ಕೆ ಬಳಸಲು ತಂದಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉಗ್ರರ ಕುರಿತು ಗುಪ್ತಚರ ವರದಿ: ಮಂಗಳೂರಿನಲ್ಲಿಯೂ ಕಟ್ಟೆಚ್ಚರಉಗ್ರರ ಕುರಿತು ಗುಪ್ತಚರ ವರದಿ: ಮಂಗಳೂರಿನಲ್ಲಿಯೂ ಕಟ್ಟೆಚ್ಚರ

ಈ ಕುರಿತು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಡಾ ಹರ್ಷ, "ಬಂಧಿತ 8 ಮಂದಿ ಯಾವ ಉದ್ದೇಶಕ್ಕಾಗಿ ಮಂಗಳೂರಿಗೆ ಬಂದಿದ್ದರು ಎನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆ" ಎಂದರು.

8 Arrested For Suspicious Behaviour In Mangaluru

ಸ್ವಾತಂತ್ರ್ಯೋತ್ಸವದ ಬಂದೋಬಸ್ತ್ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭ, ಪಂಪ್ ವೆಲ್ ಬಳಿಯಿರುವ ಲಾಡ್ಜ್ ಒಂದರಲ್ಲಿ ಅನುಮಾನಾಸ್ಪದ‌ ವ್ಯಕ್ತಿಗಳು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದಾಗ 8 ಆರೋಪಿಗಳು ಅಪರಾಧ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಆರೋಪಿಗಳು ಕೇಂದ್ರೀಯ ತನಿಖಾ ಸಂಸ್ಥೆಯ ನೇಮ್ ಬೋರ್ಡ್ ಅಳವಡಿಸಿರುವ ಕಾರಿನಲ್ಲಿ ಬಂದಿರುವುದು ಪತ್ತೆಯಾಗಿದೆ.

8 Arrested For Suspicious Behaviour In Mangaluru

ಈ ತಂಡ ಪ್ರಭಾವಿ ವ್ಯಕ್ತಿಗಳನ್ನು ಬೆದರಿಸಿ ಹಣ ವಸೂಲಿ ಮಾಡುವ ದಂಧೆಯಲ್ಲಿ ನಿರತರಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಬಂಧಿತರಲ್ಲಿ ಪ್ರಮುಖ ಆರೋಪಿಯಾಗಿರುವ ಕೇರಳ ಮೂಲದ ಸ್ಯಾಮ್ ಪೀಟರ್ ಎಂಬಾತ ಪಶ್ಚಿಮ ಬಂಗಾಳ, ಭುವನೇಶ್ವರ ಮೊದಲಾದ ಕಡೆಯಲ್ಲೂ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ. ಈತ ಸ್ಥಳೀಯರ ಸಂಪರ್ಕದ ಮೂಲಕ ಮಂಗಳೂರಿಗೆ ಬಂದಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

English summary
8 arrested belongs to gang involved in cheating and extorting . One revolver ,8 live bullets car recovered from them
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X