ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಇಂದು ಒಂದೇ ದಿನ 8 ಮಂದಿ ಸಾವು
ಮಂಗಳೂರು, ಜುಲೈ 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿಗೆ ಎಂಟು ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.
Recommended Video
Nepals bans Indian TV channels,ನೇಪಾಳದಲ್ಲಿ ಭಾರತೀಯ ಸುದ್ದಿ ವಾಹಿನಿಗಳ ಪ್ರಸಾರ ಬಂದ್ | Oneindia Kannada
ಕೊರೊನಾ ಸೋಂಕಿನಿಂದ ಮೃತಪಟ್ಟವರಲ್ಲಿ ಏಳು ಮಂದಿ ಪುರುಷರು ಹಾಗೂ ಒಬ್ಬರು ಮಹಿಳೆ ಇದ್ದಾರೆ. 35, 65, 67, 48, 57, 68 ಮತ್ತು 55ರ ವಯೋಮಾನದ ಪುರುಷರು ಹಾಗೂ 58 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದಾಗಿ ಇಂದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಜೊತೆಗೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 139 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

51 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ಸೋಂಕಿನಿಂದ 753 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.












Click it and Unblock the Notifications