• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking: ದಕ್ಷಿಣ ಕನ್ನಡದಲ್ಲಿ ಕೊರೊನಾಗೆ ಸೋಂಕಿಗೆ ಮತ್ತೊಂದು ಬಲಿ

|

ಮಂಗಳೂರು, ಮೇ 14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಮತ್ತೊಂದು ಬಲಿ ಪಡೆದಿದೆ. ರಾಜ್ಯದಲ್ಲಿ ಇಂದು ಒಂದೇ ದಿನ ಮೂವರು ಮೃತಪಟ್ಟಿದ್ದಾರೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ರಾಜ್ಯಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ವಿಕ್ರೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರೆ, ಕಲಬುರಗಿಯಲ್ಲಿ ಕೂಡ ಓರ್ವ ಮೃತಪಟ್ಟಿದ್ದಾರೆ. ಕಲಬುರಗಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಕಲುರಗಿಯಲ್ಲಿ ಇದುವರೆಗೆ 7 ಮಂದಿ ಮೃತಪಟ್ಟಿದ್ದಾರೆ.

ಇದೀಗ ಮಂಗಳೂರಿನಲ್ಲಿ 80 ವರ್ಷದ ವೃದ್ಧೆ ಮೃತಪಟ್ಟಿದ್ದು ಇದುವರೆಗೆ ಮಂಗಳೂರಿನಲ್ಲಿ ಐದು ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದಿಂದ ಬಂದಿದ್ದ 60 ವರ್ಷದ ವೃದ್ಧ ಕೊರೊನಾದಿಂದ ಮೃತಪಟ್ಟಿದ್ದಾರೆ. ರೋಗಿ ನಂಬರ್ 796 ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 33ಕ್ಕೆ ಏರಿಕೆ

ಮೃತ ವೃದ್ಧನಿಂದ ಪತ್ನಿ ಮತ್ತು ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್‍ಗೆ ಸೋಂಕು ತಗುಲಿತ್ತು. ಮೃತ ವೃದ್ಧ ಅನಂತಪುರ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ಅನಾರೋಗ್ಯದ ಕಾರಣ ಆಂಧ್ರ ಪ್ರದೇಶದಲ್ಲೇ ಚಿಕಿತ್ಸೆ ಪಡೆದಿದ್ದರು. ನಂತರ ಚಿಕಿತ್ಸೆಗೆ ಎಂದು ಬೆಂಗಳೂರಿಗೆ ಅನಂತಪುರ ಜಿಲ್ಲೆಯಿಂದ ಬಂದಿದ್ದರು.

ಈ ವೇಳೆ ವೃದ್ಧ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದಾರೆ. ಆಗ ವೃದ್ಧ ಲೋ ಬಿಪಿ, ಶುಗರ್, ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು.

ಇನ್ನು ಕಲಬುರಗಿಯಲ್ಲಿ ಸಾವಿನ ಸಂಖ್ಯೆ ಏಳಕ್ಕೆ ಏರಿದೆ. ಕಲಬುರಗಿಯಲ್ಲಿ ದಾಖಲಾದ ಕೊರೊನಾ ಪಾಸಿಟಿವ್ ಕೇಸ್‌ನ ಹತ್ತರಲ್ಲಿ ಓರ್ವ ಮೃತಪಟ್ಟಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಎಷ್ಟೇ ಹರಸಾಹಸ ಪಡುತ್ತಿದ್ದರೂ ಪ್ರಯೋಜನವಾಗುತ್ತಿಲ್ಲ.

English summary
Dakshina Kannada district on Thursday recorded its 5th death due to Covid-19 with a 80-year-old woman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X