ಹಾಜಬ್ಬರ ಶಾಲೆಯಲ್ಲಿ ದುರಂತ: ತಡೆಗೋಡೆ ಕುಸಿದು ವಿದ್ಯಾರ್ಥಿನಿ ಸಾವು
ಮಂಗಳೂರು, ಮೇ 20: ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ ಎಂದು ಗುರುತಿಸಲಾಗಿದೆ.
ನ್ಯೂಪಡ್ಪು ಹಾಜಬ್ಬರ ಶಾಲೆಯಲ್ಲಿ 3ನೇ ತರಗತಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಶಾಜಿಯಾ ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್ಎಸ್ ಶಿಬಿರದಲ್ಲಿ ಭಾಗಿಯಾಗಿದ್ದಳು. ಇಂದು ಗೇಟಿನ ಬಳಿ ಆಟವಾಡುತ್ತಿರುವಾಗ, ಮಳೆಗೆ ನೆನೆದಿದ್ದ ಶಾಲೆಯ ತಡೆಗೋಡೆ ಏಕಾಏಕಿ ಕುಸಿದಿದ್ದು, ಬಾಲಕಿ ತಡೆಗೋಡೆಯ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾಳೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಕಟ್ಟಿದ ನ್ಯೂಪಡ್ಪು ಶಾಲೆಯಲ್ಲಿ ಈ ದುರಂತ ನಡೆದಿದೆ.

ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲು
ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುಗೆರ್ಕಳ ಸಮೀಪದ ಉಬ್ಬರಬೈಲು ಎಂಬಲ್ಲಿ ಸಂಭವಿಸಿದೆ. ಮುಡ್ಡಾಯಿಗುಡ್ಡೆ ನಿವಾಸಿ ಹರೀಶ್ ಪೂಜಾರಿ (48) ಮತ್ತು ಅವರ ಅಕ್ಕನ ಮಗ ಕಾರ್ಕಳದ ಕಾಲೇಜು ವಿದ್ಯಾರ್ಥಿ ಹೃತೇಶ್ ಪೂಜಾರಿ (18) ಉಬ್ಬರಬೈಲು ಗುಂಡಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಸಂದರ್ಭ ನೀರಿನ ಸುಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಜೆಕಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವು
ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಡೆದಿದೆ. ಇರ್ಷಾದ್ ( 56 ಮೃತ ದುರ್ದೈವಿ. ಶನಿವಾರ ತಡರಾತ್ರಿ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಬಿರುಗಾಳಿ ಜೊತೆಗೆ ಭರ್ಜರಿ ಮಳೆಯಾಗಿದ್ದು, ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದೆ.
ಭಾನುವಾರ ಬೆಳಗ್ಗೆ ಇರ್ಷಾದ್ ಮನೆಯಿಂದ ರಸ್ತೆಗೆ ಬಂದ ಸಂದರ್ಭದಲ್ಲಿ ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದೇ ತುಳಿದಿದ್ದಾರೆ. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ಇರ್ಷಾದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಮೆಸ್ಕಾಂಗೆ ವಿಷಯ ತಿಳಿಸಿದ್ದು, ಘಟನಾ ಸ್ಥಳಕ್ಕಾಗಮಿಸಿದ ಮೆಸ್ಕಾಂ ಸಿಬ್ಬಂದಿ ತುಂಡಾಗಿದ್ದ ವಿದ್ಯುತ್ ತಂತಿ ಸರಿಪಡಿಸುವ ಕಾರ್ಯದಲ್ಲಿ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಮತ್ತು ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications