ಮಂಗಳೂರಿನಲ್ಲಿ ಗ್ರಾಪಂ ಉಪಾಧ್ಯಕ್ಷನ ಬರ್ಬರ ಹತ್ಯೆ

ಮಂಗಳೂರಿನ ಕರೋಪಾಡಿಯಲ್ಲಿ ಜಲೀಲ್ ಕರೋಪಾಡಿ ಎಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷರನ್ನು ನಾಲ್ವರು ಮುಸುಕುಧಾರಿಗಳು ಹತ್ಯೆಗೈದ ಘಟನೆ ನಡೆದಿದೆ.

ಮಂಗಳೂರು, ಏಪ್ರಿಲ್ 20: ಗ್ರಾಮ ಪಂಚಾಯತ್ ಕಚೇರಿಗೆ ನುಗ್ಗಿ ಬೆಳ್ಳಂಬೆಳಗ್ಗೆ ಗ್ರಾಪಂ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಅವರನ್ನು ನಾಲ್ವರು ಮುಸುಕುಧಾರಿಗಳು ಮಚ್ಚಿನಿಂದ ಥಳಿಸಿ ಹತ್ಯೆಗೈದ ಘಟನೆ ಮಂಗಳೂರಿನ, ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ಇಂದು (ಏಪ್ರಿಲ್ 20) ನಡೆದಿದೆ.

ಜಲೀಲ್ ಕರೋಪಾಡಿ, ಬಂಟ್ವಾಳ ತಾ.ಪಂ. ಹಿರಿಯ ಸದಸ್ಯ ಉಸ್ಮಾನ್ ಕರೋಪಾಡಿಯವರ ಪುತ್ರನಾಗಿದ್ದು, ಈ ಹಲ್ಲೆಗೆ ಸ್ಪಷ್ಟ ಕಾರಣಗಳಿನ್ನೂ ತಿಳಿದುಬಂದಿಲ್ಲ.

A Gram Panchayat official kills in Mangaluru

ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಜಲೀಲ್ ಅವರನ್ನು ದೇರಳಕಟ್ಟೆಯ ಕಣಚೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಇವರನ್ನು ಹತ್ಯೆಗೈದ ಮುಸುಕುಧಾರಿಗಳು ಕೇರಳ ಗಡಿ ಭಾಗದ ದುಷ್ಕರ್ಮಿಗಳು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+