ಉಡುಪಿ: ಕಾಣೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ
ಉಡುಪಿ, ಸೆಪ್ಟೆಂಬರ್ 26 : ನಿನ್ನೆ (ಸೆ.25) ಮಧ್ಯಾಹ್ನ ಮನೆಯಿಂದ ಹೊರಟು ಹೋಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಇಂದು (ಸೆ.26) ಉಡುಪಿಯ ಎರ್ಮಾಳಿನ ಪೂಂದಾಡು ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ.
ಅದಮಾರು ಮಠದ ಬಳಿಯ ನಿವಾಸಿ ರವಿ ದೇವಾಡಿಗ (48) ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ರೈಲ್ವೆ ಹಳಿಯ ಮೇಲೆ ಮೃತದೇಹ ಬಿದ್ದಿರುವುದನ್ನು ಕಂಡು ಸ್ಥಳೀಯರು ಪಡುಬಿದ್ರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ

ಪಡುಬಿದ್ರಿ ಪೊಲೀಸ್ ಠಾಣೆ ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ. ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾನಾ ಅಥವಾ ರೈಲ್ವೆ ಟ್ರ್ಯಾಕ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರಾ ಎಂಬ ಬಗ್ಗೆ ಇನ್ನಷ್ಟೇ ತನಿಖೆ ಆಗಬೇಕಿದೆ.












Click it and Unblock the Notifications