Get Updates
Get notified of breaking news, exclusive insights, and must-see stories!

ಮಂಗಳೂರಿನಲ್ಲಿ ಲಂಚ ಪಡೆಯುವಾಗಲೇ ಎಸಿಬಿ ಬಲೆಗೆ ಬಿದ್ದ ಪ್ರಾಜೆಕ್ಟ್ ಇಂಜಿನಿಯರ್

ಮಂಗಳೂರು, ಅಕ್ಟೋಬರ್. 04 : ಸರ್ಕಾರದಿಂದ ದೊರೆಯುವ ಬಯೋ ಗ್ಯಾಸ್ ಸಬ್ಸಿಡಿಗೆ ಏಜೆನ್ಸಿ ಮಾಲೀಕರೊಬ್ಬರಿಂದ ಲಂಚ ಪಡೆಯುತ್ತಿದ್ದ ಪ್ರಾಜೆಕ್ಟ್ ಇಂಜಿನಿಯರ್ ಒಬ್ಬರು ಎಸಿಬಿ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಮಂಗಳೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿರುವ ಸಮಗ್ರ ಗ್ರಾಮೀಣ ಇಂಧನ ಯೋಜನೆಯ ಪ್ರಾಜೆಕ್ಟ್ ಇಂಜಿನಿಯರ್ ಆಗಿರುವ ಎನ್.ನಾಗೇಶ್ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದವರು.

A project engineer has been caught in a red hand for ACB trap in Mangaluru

ಇವರು ಬಯೋ ಗ್ಯಾಸ್ ಏಜೆನ್ಸಿ ಮಾಲೀಕರಲ್ಲಿ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಬಯೋ ಗ್ಯಾಸ್ ಎಜೆನ್ಸಿ ಮಾಲೀಕರು 15 ಸಾವಿರ ರೂಪಾಯಿ ನೀಡಿದ್ದು, ಮತ್ತೆ 35 ಸಾವಿರ ರೂಪಾಯಿ ನೀಡದಿದ್ದರೆ ಸಬ್ಸಿಡಿ ಹಣ ಬಿಡುಗಡೆ ಮಾಡುವುದಿಲ್ಲ ಎಂದು ಇಂಜಿನಿಯರ್ ಪೀಡಿಸುತ್ತಿದ್ದ ಎಂದು ದೂರಲಾಗಿದೆ.

A project engineer has been caught in a red hand for ACB trap in Mangaluru

ಇದರಿಂದ ನೊಂದ ಬಯೋ ಗ್ಯಾಸ್ ಏಜೆನ್ಸಿ ಮಾಲೀಕರು ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಕಚೇರಿಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಬುಧವಾರ ಪ್ರಾಜೆಕ್ಟ್ ಇಂಜಿನಿಯರ್ ಎನ್.ನಾಗೇಶ್ ಅವರು 30ಸಾವಿರ ರೂಪಾಯಿ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+