ಸಹೃದಯಿ ವ್ಯಕ್ತಿತ್ವದ ಖ್ಯಾತ ಛಾಯಾ ಪತ್ರಕರ್ತ ಕೇಶವ ವಿಟ್ಲ ಇನ್ನಿಲ್ಲ
ಮಂಗಳೂರು ಮೇ 28: ಕರ್ನಾಟಕದ ನೈಸರ್ಗಿಕ ಸಂಪತ್ತನ್ನು ಕ್ಯಾಮೆರಾ ಕಣ್ಣಿನ ಮೂಲಕ ತೋರಿಸಿ ಹೊಸ ಲೋಕವೇ ತೆರೆದಿಟ್ಟಿದ್ದ ಪ್ರಸಿದ್ಧ ಮಾನವಾಸಕ್ತ, ಖ್ಯಾತ ಹಿರಿಯ ಪತ್ರಿಕಾ ಛಾಯಾಗ್ರಾಹಕ ಕೇಶವ ವಿಟ್ಲ ಇನ್ನಿಲ್ಲ.
ಹಲವಾರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಶವ್ ವಿಟ್ಲ ಇಂದು ಸೋಮವಾರ ಮುಂಜಾನೆ ಮೂರು ಗಂಟೆಗೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. 56ರ ಹರೆಯದ ವಿಟ್ಲ ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದವಾರದ ಕೇಶವ ವಿಟ್ಲ ಅವರು 1984ರಲ್ಲಿ ಮುಂಗಾರು ಪತ್ರಿಕೆಯ ಮೂಲಕ ಪತ್ರಿಕಾ ಛಾಯಗ್ರಾಹಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಕೇಶವ್ ವಿಟ್ಲ ನಂತರ 1996ರಲ್ಲಿ ಬೆಂಗಳೂರಿನಲ್ಲಿ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕಾ ಬಳಗದಲ್ಲಿ ಹಲವು ವರ್ಷಗಳ ಕಾಲ ಛಾಯಗ್ರಾಹಕರಾಗಿ ಸೇವೆ ಸಲ್ಲಿಸಿದರು.
ತದನಂತರ ಫ್ರೀಲಾನ್ಸ್ ಪತ್ರಿಕಾ ಛಾಯಾಗ್ರಾಹಕರಾಗಿ ದಿ ಟೆಲಿಗ್ರಾಫ್ , ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಗಳಿಗೆ ಛಾಯಚಿತ್ರಗಳನ್ನು ಪೂರೈಸಿದ್ದಾರೆ.

ತಮ್ಮ ಜೀವನದುದ್ದಕ್ಕೂ ಶ್ರಮವಹಿಸಿ ಸಿದ್ದಪಡಿಸಿದ್ದ ಕರ್ನಾಟಕದ ನೈಸರ್ಗಿಕ ಸಂಪತ್ತಿನ ಕಾಫಿ ಟೇಬಲ್ ಪುಸ್ತಕ "ಫೆಸೆಟ್ಸ್ ಆಫ್ ಕರ್ನಾಟಕ " ಛಾಯಚಿತ್ರ ಸಂಪುಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದರು. ಈ ಪುಸ್ತಕ ರಾಜ್ಯದಾದ್ಯಂತ ಭಾರೀ ಜನಮನ್ನಣೆ ಪಡೆದಿತ್ತು.
In Pics: ಕೇಶವ ವಿಟ್ಲ ಕಂಡಂತೆ ಕರ್ನಾಟಕದ ಜಲಸಿರಿ
ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಶ್ರೇಷ್ಟ ಸುದ್ದಿ ಛಾಯಾಗ್ರಾಹಕ ಪ್ರಶಸ್ತಿ , ಬೆಂಗಳೂರು ಪ್ರೆಸ್ ಕ್ಲಬ್ ನಿಂದ ಜೀವಮಾನ ಸಾಧನೆಗಾಗಿ ಪ್ರಶಸ್ತಿ , ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಬಲಿಯೇಂದ್ರ ಪುರಸ್ಕಾರ , ತುಳುನಾಡ ಸಿರಿ ಪ್ರಶಸ್ತಿ ಗಳು ಕೇಶವ ಅವರನ್ನು ಅರಸಿ ಬಂದವು . ಅವರು ಹಲವು ಏಕವ್ಯಕ್ತಿ ಛಾಯಚಿತ್ರ ಪ್ರದರ್ಶನಗಳನ್ನು ಆಯೋಜಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications