ಮಂಗಳೂರು: ತಡರಾತ್ರಿವರೆಗೂ ಪರೀಕ್ಷೆಗೆ ಓದಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
ಮಂಗಳೂರು, ಫೆಬ್ರವರಿ 16: ತಡರಾತ್ರಿವರೆಗೂ ಓದುತ್ತಿದ್ದ ವಿದ್ಯಾರ್ಥಿನಿ ಮಲಗಿದ ಹಾಸಿಗೆಯಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಪಟ್ಟಣ ಬಳಿಯ ನೆಕ್ಕಿಲಾಡಿ ಕುರ್ವೇಲುನ ಗ್ರಾಮದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹಫೀಜಾ (17) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ ನಿವಾಸಿ, ಉದ್ಯಮಿ ದಾವೂದ್ ಎಂಬವರ ಪುತ್ರಿ ಮೃತ ಹಫೀಜಾ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ಕಲಿಯುತ್ತಿದ್ದಳು. ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ(ಫೆಬ್ರವರಿ15)ರ ತಡರಾತ್ರಿಯವರೆಗೆ ಓದಿ ಮಲಗಿದ್ದಾಳೆ. ದುರಾದೃಷ್ಟವಶಾತ್ ಹಫೀಜಾ ಬೆಳ್ಳಗೆ ಏಳಲೇ ಇಲ್ಲ. ಬೆಳಿಗ್ಗೆ ಹಾಸಿಗೆಯಲ್ಲಿ ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾಳೆ.

ಹಫೀಜಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ. ಉಪ್ಪಿನಂಗಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಓದಿ ಉನ್ನತ ಹುದ್ದೆಗೆ ಹೋಗಿ ಬದುಕಿ ಬಾಳಬೇಕಿದ್ದ ಮಗಳು ಹೃದಯಾಘಾತದಿಂದ ಸಾವನ್ನಪ್ಪಿರುವುದನ್ನು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನಮಾಜ್ ಮಾಡುವಾಗಲೇ ವ್ಯಕ್ತಿಗೆ ಹೃದಯಾಘಾತ
ಉಡುಪಿ: ನಮಾಜ್ ಮಾಡುವಾಗಲೇ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಬಸ್ ನಿಲ್ದಾಣ ಸಮೀಪದ ಅಂಜುಮಾನ್ ಮಸೀದಿಯಲ್ಲಿ ನಡೆದಿತ್ತು. ದೊಡ್ಡಣಗುಡ್ಡೆಯ ಕರಂಬಳ್ಳಿ ನಿವಾಸಿ ಮುಸ್ತಾಕ್ (55) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ ಎಂದು ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಮುಸ್ತಾಕ್ ಎಂದಿನಂತೆ ಫೆಬ್ರವರಿ 09ರಂದು ಮಸೀದಿಗೆ ತೆರಳಿದ್ದಾರೆ. ಬೆಳಗ್ಗೆ ಎಲ್ಲರೊಂದಿಗೆ ಸಾಲಿನಲ್ಲಿ ಕುಳಿತುಕೊಂಡು ಮೊದಲು ನಮಾಜ್ ಮಾಡಿದ್ದಾರೆ. ಖುತ್ಬಾ ಕೇಳಲು ಕುಳಿತಿರುವಾಗ ವ್ಯಕ್ತಿಗೆ ಹೃದಯಾಘಾತ ಸಂಭವಿಸಿದೆ. ಹೃದಯಾಘಾತವಾಗುವಾಗ ಮೊದಲು ನಿಧಾನಕ್ಕೆ ನೆಲಕ್ಕೆ ಬಿದ್ದಿದ್ದಾರೆ. ದುರಾದೃಷ್ಟವಶಾತ್ ಮುಸ್ತಾಕ್ ಸಂಪೂರ್ಣವಾಗಿ ನೆಲಕ್ಕೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ನಮಾಜ್ ವೇಳೆ ವ್ಯಕ್ತಿ ಕುಸಿದು ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.












Click it and Unblock the Notifications