ದುಬೈನಲ್ಲಿ ಉಳ್ಳಾಲದ ಯುವತಿ ದಾರುಣ ಸಾವು: ಅಷ್ಟಕ್ಕೂ ನಡೆದಿದ್ದೇನು..?

ಮಂಗಳೂರು, ಫೆಬ್ರವರಿ 23: ದುಬೈನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಯುವತಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋಟೆಕಾರು, ಬೀರಿಯ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂಬ ಯುವತಿ ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.

ಮಂಗಳೂರು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ದುಬೈನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲೇ ವಾಸವಾಗಿದ್ದರು. ವಿದಿಶಾ ಪ್ರತಿದಿನ ಕಂಪೆನಿಯ ಕ್ಯಾಬ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಆದರೆ ವಿದಿಶಾ ಗುರುವಾರ ಕ್ಯಾಬ್ ತಪ್ಪಿದ ಹಿನ್ನಲೆ ತಮ್ಮದೇ ಕಾರಿನಲ್ಲಿ ಆಫೀಸ್‌ಗೆ ತೆರಳಿದ್ದಾರೆ.

A Young Woman From Ullal Died In Car Accident At Dubai

ಈ ವೇಳೆ ವಿದಿಶಾ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದಿಸೆಯಲ್ಲೇ ರೋಟರಿ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬೈಗೆ ತೆರಳಿ ಅಲ್ಲಿನ ಏರ್‌ಫೋರ್ಟ್‌ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು.

A Young Woman From Ullal Died In Car Accident At Dubai

ಹೊಸ ಕಾರು ಖರೀದಿಸಿದ್ದ ವಿದಿಶಾ ದುಬೈಯಲ್ಲಿ ವಾಹನ ಚಾಲನಾ ಪರವಾನಿಗೆ ಪಡೆದ ಬಳಿಕ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದರು. ಪೋಷಕರು ಸದ್ಯ ಪುತ್ರಿಯ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ. ವಿದೇಶದಲ್ಲಿ ಮಗಳು ಸಾವನ್ನಪ್ಪಿರುವ ಸುದ್ದಿಯಿಂದ ಪೋಷಕರು ಕಂಗಾಲಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+