ದಕ್ಷಿಣ ಕನ್ನಡದಲ್ಲಿ ದೆಹಲಿ ಮಾದರಿ ಅಭಿವೃದ್ಧಿಗೆ ಭರವಸೆ ನೀಡಿದ ಎಎಪಿ
ಮಂಗಳೂರು ಏಪ್ರಿಲ್ 8: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಒಂದು ತಿಂಗಳು ಮಾತ್ರ ಬಾಕಿ ಇದೆ. ಹೀಗಾಗಿ ಪಕ್ಷಗಳು ಮತದಾರರನ್ನು ಸೆಳೆಯುವ ಕಾರ್ಯದಲ್ಲಿ ಹೆಚ್ಚು ನಿರತರಾಗಿದ್ದಾರೆ. ಈ ಬಾರಿ ರಾಜ್ಯದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಮುಂದಾಗಿರುವ ಪಕ್ಷಗಳಲ್ಲಿ ಆಮ್ ಆದ್ಮಿ ಕೂಡ ಒಂದು. ಹೀಗಾಗಲೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭರವಸೆಗಳ ಮಹಾಪೂರವೇ ಹರಿಸುತ್ತಿದೆ.
ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಗೆಲುವು ಸಾಧಿಸಲು ಅನೇಕ ಭರವಸೆಗಳನ್ನು ನೀಡಿರುವ ಆಮ್ ಆದ್ನಿ ಪಕ್ಷ ದೆಹಲಿ ಮಾದರಿಯಲ್ಲಿಯೇ ಅಭಿವೃದ್ಧಿ ಭರವಸೆಯನ್ನು ನೀಡಿದೆ. ಈಗಾಗಲೇ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವ ಎಎಪಿ, ದೆಹಲಿ ಸರ್ಕಾರದ ಮಾದರಿಯಲ್ಲಿ ಕರಾವಳಿ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಪಕ್ಷ ಒತ್ತು ನೀಡಲಿದೆ ಎಂದಿದೆ.

ದೆಹಲಿ ಮಾದರಿ ಅಭಿವೃದ್ಧಿ
ಎಎಪಿ ಅಭ್ಯರ್ಥಿ ಸಂತೋಷ್ ಕಾಮತ್ ಮಂಗಳೂರು ನಗರ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಮುಲ್ಕಿ-ಮೂಡುಬಿದಿರೆಯಿಂದ ವಿಜಯನಾಥ ವಿಠಲ ಶೆಟ್ಟಿ; ಸುಳ್ಯದಿಂದ ಸುಮನಾ ಬೆಳಾರ್ಕರ್ ಕೆ ಕೆ; ಮಂಗಳೂರು ನಗರ ಉತ್ತರದಿಂದ ಸಂದೀಪ್ ಪುರಂದರ ಶೆಟ್ಟಿ ಮತ್ತು ಪುತ್ತೂರು ಕ್ಷೇತ್ರದಿಂದ ಬಿ ಕೆ ವಿಶುಕುಮಾರ್ ಸ್ಪರ್ಧಿಸಲಿದ್ದಾರೆ.
ದಕ್ಷಿಣ ಕನ್ನಡ ಆಮ್ ಆದ್ಮಿ ಪಕ್ಷದ (ಎಎಪಿ) ಜಿಲ್ಲಾಧ್ಯಕ್ಷ ಅಶೋಕ್ ಅದಮಲೆ ಗುರುವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿ, ದೆಹಲಿ ಸರ್ಕಾರದ ಮಾದರಿಯಲ್ಲಿ ಕರಾವಳಿ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಪಕ್ಷ ಒತ್ತು ನೀಡಲಿದೆ.

ಎಎಪಿ ಪ್ರಣಾಳಿಕೆ
ಪಕ್ಷದ ಪ್ರಣಾಳಿಕೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಗಳು ಮತ್ತು ಆಸ್ಪತ್ರೆಗಳ ಅಭಿವೃದ್ಧಿಯು ಪಕ್ಷದ ಆದ್ಯತೆಯಾಗಿದೆ. ಪ್ರಣಾಳಿಕೆಯು ರಾಜ್ಯದ ಎಲ್ಲಾ ಪ್ರದೇಶಗಳ ಅಭಿವೃದ್ಧಿಯನ್ನು ಖಾತರಿಪಡಿಸುತ್ತದೆ. ಪ್ರತಿ ಪ್ರದೇಶಕ್ಕೆ ವಾರ್ಷಿಕ 5,000 ಕೋಟಿ ರೂ ಮೂಲಸೌಕರ್ಯ ಅಭಿವೃದ್ಧಿ ನಿಧಿಯನ್ನು ಪಕ್ಷ ಖಚಿತಪಡಿಸುತ್ತದೆ. ಉತ್ತಮ ರಸ್ತೆಗಳ ಜೊತೆಗೆ ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಪ್ರವಾಸೋದ್ಯಮಕ್ಕೆ ತಲಾ 10 ಕೇಂದ್ರಗಳನ್ನು ಪಕ್ಷ ಸ್ಥಾಪಿಸಲಿದೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.
ಜೊತೆಗೆ ಪಕ್ಷ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಶಿಕ್ಷಣವನ್ನು ನೀಡುವುದಾಗಿ ಭರವಸೆ ನೀಡಿದೆ. ಇದಲ್ಲದೆ, ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ದೆಹಲಿ ಸರ್ಕಾರಿ ಆಸ್ಪತ್ರೆಗಳಿಗೆ ಸಮಾನವಾಗಿ ಅಭಿವೃದ್ಧಿಪಡಿಸಲಾಗುವುದು ಎಂದಿದೆ. ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಎಎಪಿ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಅಡಿಕೆ ರೈತರಿಗೆ ಬೆಂಬಲ ನೀಡಿದ ಪಕ್ಷ
ಜಿಲ್ಲೆಯಲ್ಲಿ ಅಡಕೆ ಮತ್ತು ಅಡಿಕೆ ರೈತರಿಗೆ ಪಕ್ಷ ಬೆಂಬಲ ನೀಡಲಿದೆ. ಜಿಲ್ಲೆಯ ಬೆಳೆಗಾರರನ್ನು ಕಾಡುತ್ತಿರುವ ಹಳದಿ ಎಲೆ ರೋಗವನ್ನು ಕಡಿಮೆ ಮಾಡುವ ಕೀಟನಾಶಕಗಳ ಅಭಿವೃದ್ಧಿಗೆ ಉಪಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಗೋಡಂಬಿ ಸಂಸ್ಕರಣಾ ಕೈಗಾರಿಕೆಗಳಿಗೆ ಆರ್ಥಿಕ ನೆರವು ಮತ್ತು ಇತರ ಬೆಳೆಗಳಿಗೆ ಬದಲಾಯಿಸಲು ಯೋಜಿಸುವ ಅಡಿಕೆ ಬೆಳೆಗಾರರಿಗೆ ಅನುದಾನ, ಸಹ ಎಎಪಿ ಪ್ರಣಾಳಿಕೆಯ ಭಾಗವಾಗಿದೆ. ಪ್ರಣಾಳಿಕೆಯಲ್ಲಿನ ಎಲ್ಲಾ ಭರವಸೆಗಳನ್ನು ಪಕ್ಷ ಅಧಿಕಾರಕ್ಕೆ ಬಂದರೆ ಈಡೇರಿಸಲಾಗುವುದು ಎಂದು ಎಎಪಿ ಹೇಳಿದೆ.
ಪಕ್ಷವು ಈಗಾಗಲೇ ರಾಜ್ಯಕ್ಕೆ 10 ಭರವಸೆಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. "ಶೂನ್ಯ ಶೇಕಡಾ ಭ್ರಷ್ಟಾಚಾರ ಮತ್ತು 100% ಕೆಲಸ" ಎಂಬುದು ಪಕ್ಷದ ಧ್ಯೇಯವಾಕ್ಯವಾಗಿದೆ. ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯದ ಜೊತೆಗೆ, ಪಕ್ಷವು ನಿರುದ್ಯೋಗಿ ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಮೀಸಲಾತಿ, ಉಚಿತ ವಿದ್ಯುತ್ ಸರಬರಾಜು ಮತ್ತು ಇತರ ಭರವಸೆಗಳನ್ನು ನೀಡಿದೆ.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದ್ದರು.












Click it and Unblock the Notifications