ವರ್ಗಾವಣೆಯ ಗೊಂದಲಕ್ಕೆ ತೆರೆ ಎಳೆದ ಎ.ಬಿ.ಇಬ್ರಾಹಿಂ

ಮಂಗಳೂರು, ಜುಲೈ 25 : ತಮ್ಮ ವರ್ಗಾವಣೆ ಕುರಿತು ಹಬ್ಬಿದ್ದ ಸುದ್ದಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಸ್ಪಷ್ಟನೆ ನೀಡಿದ್ದಾರೆ. ಎ.ಬಿ.ಇಬ್ರಾಹಿಂ ಅವರ ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಡೆ ನೀಡಿದ್ದಾರೆ ಎಂಬ ಸುದ್ದಿಗಳನ್ನು ಅವರು ತಳ್ಳಿ ಹಾಕಿದ್ದಾರೆ.

ಸೋಮವಾರ ಬೆಳಗ್ಗೆಯಿಂದ ಎ.ಬಿ.ಇಬ್ರಾಹಿಂ ಅವರ ವರ್ಗಾವಣೆಗೆ ತಡೆ ನೀಡಲಾಗಿದೆ ಎಂಬ ಸುದ್ದಿ ಹಬ್ಬಿತ್ತು. ಒನ್ ಇಂಡಿಯಾಗೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, 'ವರ್ಗಾವಣೆಗೆ ತಡೆ ನೀಡಿಲ್ಲ. ಡಾ.ಕೆ.ಜಿ.ಜಗದೀಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ' ಎಂದು ಹೇಳಿದ್ದಾರೆ. [ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ವರ್ಗಾವಣೆ]

ಕಳೆದ ವಾರ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಡಾ.ಕೆ.ಜಿ.ಜಗದೀಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು. ಜಗದೀಶ್ ಅವರು ಇನ್ನೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿಲ್ಲ.[ಮುಸ್ಲಿಂ ಡಿಸಿ ಹೆಸರು ಮತ್ತು ಪುತ್ತೂರು ದೇವಾಲಯದ ವಿವಾದ]

2016ರ ಮಾರ್ಚ್‌ನಲ್ಲಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರ ಬಗ್ಗೆ ದೊಡ್ಡ ಸುದ್ದಿಯಾಗಿತ್ತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಎ.ಬಿ.ಇಬ್ರಾಹಿಂ ಹೆಸರು ಹಾಕಲಾಗಿತ್ತು. ಹಿಂದೂಯೇತರರಾದ ಜಿಲ್ಲಾಧಿಕಾರಿಯನ್ನು ಜಾತ್ರೆಗೆ ಕರೆಯುವುದು ಸರಿಯಲ್ಲ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ ಎಂಬ ವಿವಾದ ಎದ್ದಿತ್ತು.

ಯಾರು ಎ.ಬಿ.ಇಬ್ರಾಹಿಂ?

ಯಾರು ಎ.ಬಿ.ಇಬ್ರಾಹಿಂ?

ಮೊದಲು ಕೆಎಎಸ್ ಅಧಿಕಾರಿಯಾಗಿದ್ದ ಎ.ಬಿ.ಇಬ್ರಾಹಿಂ ಅವರು ನಂತರ ಐಎಎಸ್ ಅಧಿಕಾರಿಯಾಗಿ ಬಡ್ತಿ ಪಡೆದಿದ್ದರು. 2013ರ ಡಿಸೆಂಬರ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅವರು ಅಧಿಕಾರ ವಹಿಸಿಕೊಂಡಿದ್ದರು. ಎ.ಬಿ.ಇಬ್ರಾಹಿಂ ಅವರನ್ನು ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ದೊಡ್ಡ ಸುದ್ದಿಯಾಗಿತ್ತು

ದೊಡ್ಡ ಸುದ್ದಿಯಾಗಿತ್ತು

2016ರ ಮಾರ್ಚ್‌ನಲ್ಲಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರ ಬಗ್ಗೆ ದೊಡ್ಡ ಸುದ್ದಿಯಾಗಿತ್ತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಎ.ಬಿ.ಇಬ್ರಾಹಿಂ ಹೆಸರು ಹಾಕಲಾಗಿತ್ತು. ಹಿಂದೂಯೇತರರಾದ ಜಿಲ್ಲಾಧಿಕಾರಿಯನ್ನು ಜಾತ್ರೆಗೆ ಕರೆಯುವುದು ಸರಿಯಲ್ಲ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ ಎಂಬ ವಿವಾದ ಎದ್ದಿತ್ತು.

ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು

ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಬಗ್ಗೆ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಜಾತ್ರೆಯಲ್ಲಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಪಾಲ್ಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿತ್ತು.

ಕಳೆದ ವಾರ ವರ್ಗಾಣೆಯಾಗಿತ್ತು

ಕಳೆದ ವಾರ ವರ್ಗಾಣೆಯಾಗಿತ್ತು

ಜುಲೈ 21ರಂದು ಕರ್ನಾಟಕ ಸರ್ಕಾರ 24 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಕೆ.ಜಿ.ಜಗದೀಶ್ ಅವರನ್ನು ನೂತನ ಜಿಲ್ಲಾಧಿಕಾರಿಗಳಾಗಿ ನೇಮಕ ಮಾಡಲಾಗಿತ್ತು.

ಡಾ.ಕೆ.ಜಿ.ಜಗದೀಶ್ ಅವರ ಪರಿಚಯ

ಡಾ.ಕೆ.ಜಿ.ಜಗದೀಶ್ ಅವರ ಪರಿಚಯ

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ಡಾ.ಕೆ.ಜಿ.ಜಗದೀಶ್ ಅವರು 2005ನೇ ಬ್ಯಾಚ್‌ ಐಎಎಸ್ ಅಧಿಕಾರಿ. ಈ ಹಿಂದೆ ಅವರು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+