ರತ್ನಾ ಕೊಠಾರಿ ಅಸಹಜ ಸಾವು ಪ್ರಕರಣ, ಪ್ರತಿಭಟನೆ
ಮಂಗಳೂರು, ಜು. 17 : ಕುಂದಾಪುರ ತಾಲೂಕಿನ ಶಿರೂರು ಕಾಲೇಜು ವಿದ್ಯಾರ್ಥಿನಿ ರತ್ನಾ ಕೊಠಾರಿ ಅಸಹಜ ಸಾವು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬುಧವಾರ ಸಂಜೆ ಮಂಗಳೂರಿನ ಬೆಸೆಂಟ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ್, ಬೆಸೆಂಟ್ ಸಂಜೆ ಕಾಲೇಜಿನ ವಿದ್ಯಾರ್ಥಿಗಳಾದ ವಿಜಯಲಕ್ಷ್ಮಿ, ಸಿಂಧು, ಪ್ರತೀಶ್, ಎಬಿವಿಪಿ ಕಾರ್ಯಕರ್ತರಾದ ಯತೀಶ್ ಕುಮಾರ್ ಪಿ, ನಗರ ಸಂಘಟನಾ ಕಾರ್ಯದರ್ಶಿ ಗಂಗಾಧರ್ ಮುಂತಾದವರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. [ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆ]
ಪರಿಹಾರ ಘೋಷಣೆ : ಅಸಹಜ ಸಾವಿಗೀಡಾದ ಬೈಂದೂರಿನ ಕಾಲೇಜು ವಿದ್ಯಾರ್ಥಿನಿ ರತ್ನ ಕೊಠಾರಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 3 ಲಕ್ಷ ರೂ. ಪರಿಹಾರ ಘೋಷಿಸಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಮಂಗಳೂರಿನ ಪ್ರತಿಭಟನೆಯ ಚಿತ್ರಗಳು

ಅಸಹಜ ಸಾವು ಖಂಡಿಸಿ ಪ್ರತಿಭಟನೆ
ಕುಂದಾಪುರ ತಾಲೂಕಿನ ಶಿರೂರು ಕಾಲೇಜು ವಿದ್ಯಾರ್ಥಿನಿ ರತ್ನಾ ಕೊಠಾರಿ ಅಸಹಜ ಸಾವು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬುಧವಾರ ಸಂಜೆ ಮಂಗಳೂರಿನ ಬೆಸೆಂಟ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಚಿವರು ಮೌನಕ್ಕೆ ಶರಣಾಗಿದ್ದಾರೆ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ್, ಕರಾವಳಿಯಲ್ಲಿ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ದಿನೇ ಹೆಚ್ಚುತ್ತಿವೆ. ಆದರೆ, ಇಲ್ಲಿನ ಸಚಿವರು ಈ ಬಗ್ಗೆ ಗಮನ ನೀಡುತ್ತಿಲ್ಲ. ರತ್ನಾ ಅಸಹಜ ಸಾವಿನ ಪ್ರಕರಣಕ್ಕೆ ನ್ಯಾಯ ಒದಗಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಹಿಳಾ ಆಯೋಗ ಕಣ್ಣುಮುಚ್ಚಿ ಕುಳಿತಿದೆ
ರಾಜ್ಯದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚುತ್ತಿದ್ದರೂ, ರಾಜಕೀಯ ನೇತಾರರು, ಮಹಿಳಾ ಶಾಸಕಿಯರು ವಿಧಾನ ಸಭೆಯಲ್ಲಿ ಧ್ವನಿ ಎತ್ತುತ್ತಿಲ್ಲ. ಬೈಂದೂರಿನ ಅಮಾಯಕ ವಿದ್ಯಾರ್ಥಿನಿ ರತ್ನಾಳ ನಿಗೂಢ ಸಾವಿನ ಬಗ್ಗೆ ಧ್ವನಿ ಎತ್ತದ ಮಹಿಳಾ ಆಯೋಗ, ಮಹಿಳಾ ಸಂಘಟನೆಗಳು ಕಣ್ಣು ಮುಚ್ಚಿ ಕುಳಿತಿವೆಯೇ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಯಾರು ಭಾಗವಹಿಸಿದ್ದರು?
ಬೆಸೆಂಟ್ ಸಂಜೆ ಕಾಲೇಜಿನ ವಿದ್ಯಾರ್ಥಿಗಳಾದ ವಿಜಯಲಕ್ಷ್ಮಿ, ಸಿಂಧು, ಪ್ರತೀಶ್, ಎಬಿವಿಪ ಕಾರ್ಯಕರ್ತರಾದ ಯತೀಶ್ ಕುಮಾರ್ ಪಿ, ನಗರ ಸಂಘಟನಾ ಕಾರ್ಯದರ್ಶಿ ಗಂಗಾಧರ್, ಆಗ್ನೇಯ ಭಂಡಾರಿ ಮುಂತಾದವರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪರಿಹಾರ ಘೋಷಣೆ
ಬೈಂದೂರಿನ ಕಾಲೇಜು ವಿದ್ಯಾರ್ಥಿನಿ ರತ್ನ ಕೊಠಾರಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 3 ಲಕ್ಷ ರೂ. ಪರಿಹಾರ ಘೋಷಿಸಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ಬುಧವಾರ ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.












Click it and Unblock the Notifications