ಮಂಗಳೂರಿನಲ್ಲಿ ಬಸ್ ಬೆಂಕಿಗಾಹುತಿ, ಚಿತ್ರಗಳು
ಮಂಗಳೂರು, ಡಿ.1 : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ಉಪ್ಪಿನಂಗಡಿ ಸಮೀಪದ ಸಣ್ಣಂಪಾಡಿ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ಬಸ್ಸಿನಲ್ಲಿ 25 ಪ್ರಯಾಣಿಕರಿದ್ದರು. ಸೀಬರ್ಡ್ ಟ್ರಾವೆಲ್ಸ್‌ಗೆ ಸೇರಿದ ಬಸ್ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿತ್ತು. [ಚಿತ್ರಗಳು : ಐಸಾಕ್ ರಿಚರ್ಡ್, ಮಂಗಳೂರು]

ಪ್ರಯಾಣಿಕರು ಜೀವ ಉಳಿಸಿದರು : ಮುಂಜಾನೆ ಐದು ಗಂಟೆಯ ಸುಮಾರಿಗೆ ಪ್ರಯಾಣಿಕರೆಲ್ಲರೂ ಸವಿ ನಿದ್ದೆಯಲ್ಲಿದ್ದರು. ಎಚ್ಚರಗೊಂಡಿದ್ದ ಪ್ರಯಾಣಿಕರೊಬ್ಬರಿಗೆ ಬಸ್ಸಿನಲ್ಲಿ ಸುಟ್ಟವಾಸನೆ ಬರುತ್ತಿರುವುದು ಗಮನಕ್ಕೆ ಬಂದಿತು. ತಕ್ಷಣ ಅವರು ಚಾಲಕನಿಗೆ ಬಸ್ ನಿಲ್ಲಿಸುವಂತೆ ಸೂಚಿಸಿದರು.

ಬಸ್ಸಿನ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಗಮನಿಸಿದ ಚಾಲಕರು ಎಲ್ಲರನ್ನೂ ಬಸ್ಸಿನಿಂದ ಇಳಿಸಿದ್ದಾರೆ. ಪ್ರಯಾಣಿಕ, ಚಾಲಕ ಹಾಗೂ ನಿರ್ವಾಹಕರ ಸಮಯಪ್ರಜ್ಞೆಯಿಂದ ಬಸ್ಸು ಸಂಪೂರ್ಣ ಸುಟ್ಟು ಹೋದರೂ ಎಲ್ಲಾ 25 ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರೂ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. [ಹೈದರಾಬಾದಿನ ಬಸ್ ದುರಂತದ ಚಿತ್ರಗಳು]

ಅಗ್ನಿಶಾಮಕ ದಳ ಮತ್ತು ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರ ಲಗೇಜುಗಳು ಸಂಪೂರ್ಣವಾಗಿ ಸುಟ್ಟುಕರಕಲಾಗಿವೆ. ಸೀಬರ್ಡ್ ಸಂಸ್ಥೆಗೆ ಸೇರಿದ ಬಸ್ಸು ಇದಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ಇಬ್ಬರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.













Click it and Unblock the Notifications