• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಿರ್ಮಾಪಕ ಹರೀಶ್ ಶೇರಿಗಾರ್ ಜೀವನವೇ ಸ್ಫೂರ್ತಿದಾಯಕ: ನಟ ಅನಂತನಾಗ್

|

ಮಂಗಳೂರು, ಜುಲೈ 22: ಚಿತ್ರ ನಿರ್ಮಾಪಕ ಹರೀಶ್ ಶೇರಿಗಾರ್ ವರು ನಡೆದು ಬಂದ ದಾರಿಯು ಸ್ಫೂರ್ತಿಯ ಸೆಲೆಯಾಗಿದ್ದು, ಇಂದಿನ ಯುವ ಜನತೆ ಇವರನ್ನು ನೋಡಿ ಕಲಿಯುವುದು ಬಹಳಷ್ಟಿದೆ ಎಂದು ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಹೇಳಿದರು.

ಅವರು ಶನಿವಾರ ಮಂಗಳೂರಿನ ಶ್ರೀ ಗೋಕರ್ಣನಾಥ ಕಾಲೇಜ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶ್ರೀ ಗೋಕರ್ಣನಾಥ ಕಾಲೇಜ್ ನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ಇದೇ ಕಾಲೇಜಿನಲ್ಲಿ ಕಲಿತು, ಇಂದು ಉದ್ಯಮ ಕ್ಷೇತ್ರ, ಕಲಾಕ್ಷೇತ್ರ, ಸಂಗೀತ ಕ್ಷೇತ್ರ, ಪತ್ರಿಕಾ ಮಾಧ್ಯಮ, ಸಮಾಜ ಸೇವೆ ಹೀಗೆ ನಾನಾ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಯ ಮೂಲಕ ಜಗತ್ತಿಗೆ ಚಿರಪರಿಚಿತರಾಗಿರುವ ದುಬಾಯಿಯ ಖ್ಯಾತ ಉದ್ಯಮಿ ಹಾಗೂ ಕನ್ನಡ ಸಿನಿಮಾದ ನಿರ್ಮಾಪಕರಾದ ಹರೀಶ್ ಶೇರಿಗಾರ್ ಅವರನ್ನು ನೋಡಿ ಕಲಿಯಿರಿ ಎಂದು ಖ್ಯಾತ ಚಲನ ಚಿತ್ರ ನಟ ಅನಂತ್ ನಾಗ್ ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.

ಹರೀಶ್ ಶೇರಿಗಾರ್ ಅವರು ಒಬ್ಬ ಸಾಧನೆಯ ಮಾದರಿ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಅವರು ಮಂಗಳೂರಿಗೆ, ನಮ್ಮ ಜಿಲ್ಲೆಗೆ, ನಮ್ಮ ನಾಡಿಗೆ, ನಮ್ಮ ದೇಶಕ್ಕೆ ಸಾಧನೆಯಿಂದ ಏನು ಬೇಕಾದರೂ ಸಾಧಿಸ ಬಹುದೆಂಬುವುದನ್ನು ತೋರಿಸಿಕೊಟ್ಟವರು. ಅವರ ಹಾದಿಯಲ್ಲಿ ನಡೆದರೆ ಹೇಗೆ ಸಾಧನೆ ಮಾಡ ಬಹುದೆಂಬುವುದನ್ನು ತಿಳಿದುಕೊಳ್ಳಬಹುದು.

ತಾನು ಕಲಿತ ಸಂಸ್ಥೆಯನ್ನು ಮರೆಯದೆ ಸದಾ ನೆನೆಯುತ್ತಾ ಕೊಡುಗೆಗಳನ್ನು ಸಲ್ಲಿಸುವುದರ ಜೊತೆಗೆ ವಿದ್ಯಾ ಸಂಸ್ಥೆಯ ಅಭಿವೃದ್ಧಿಗೆ ಸಹಾಯ ಹಸ್ತ ನೀಡುತ್ತಿರುವ ಹರೀಶ್ ಶೇರಿಗಾರ್ ಅವರ ಮಾದರಿಯನ್ನು ವಿದ್ಯಾರ್ಥಿ ಜೀವನದಿಂದಲೇ ಕಣ್ಮುಂದೆ ಇಟ್ಟುಕೊಂಡು ಗುರು ಹಿರಿಯರನ್ನು, ತಂದೆ ತಾಯಿಗಳನ್ನು ಸ್ಮರಿಸುತ್ತಾ ಜೀವನದಲ್ಲಿ ಯಶಸ್ಸು ಕಾಣಿರಿ ಎಂದು ವಿದ್ಯಾರ್ಥಿಗಳಿಗೆ ಅನಂತ್ ನಾಗ್ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಆಕ್ಮೆ ( ACME) ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಆಡಳಿತಾ ನಿರ್ದೇಶಕ ಹಾಗೂ ಮಾರ್ಚ್ - 22 ಕನ್ನಡ ಸಿನಿಮಾದ ನಿರ್ಮಾಪಕ, ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಅವರು ಮಾತನಾಡಿ, ಕಠಿಣ ಪರಿಶ್ರಮದಿಂದ ಕಲಿತು ಸತತ ಸಾಧನೆ ಮಾಡಿದರೆ ಜೀವನದಲ್ಲಿ ಯಶಸ್ಸು ಖಂಡಿತ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ತಾವೆಲ್ಲಾ ಸಾಧನೆಯ ಹಾದಿಯಲ್ಲಿ ನಡೆಯ ಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಯಾರೂ ಕೂಡ ಹುಟ್ಟುವಾಗಲೇ ಬುದ್ಧಿವಂತರಾಗಿರುವುದಿಲ್ಲ. ವಿದ್ಯಾಭ್ಯಾಸ, ನಮ್ಮ ಶೃಮ ನಮ್ಮನ್ನು ಬುದ್ಧಿವಂತರನ್ನಾಗಿ ಮಾಡುತ್ತದೆ. ಬರೀ ಮಾರ್ಕ್ ತೆಗೆಯುವುದು ಮಾತ್ರ ವಿದ್ಯಾಭ್ಯಾಸವಲ್ಲ. ನಮ್ಮ ಸಾಧನೆಗೆ ನಮ್ಮ ಬುದ್ದಿವಂತಿಗೆ ಮತ್ತು ಲೋಕಜ್ಞಾನ ಕೂಡ ಪೂರಕವಾಗುತ್ತದೆ. ದೃಡವಾದ ನಂಬಿಕೆಯಿಂದ ಮುನ್ನುಗ ಬೇಕು. ಉತ್ತಮ ಸಾಧನೆಯ ಮೂಲಕ ದೇಶ ವಿದೇಶಗಳಲ್ಲಿ ಕಾಲೇಜಿನ ಹೆಸರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯ ಬೇಕು ಎಂದು ಹೇಳಿದರು.

ನೂತನವಾಗಿ ಅಸ್ತಿತ್ವಕ್ಕೆ ಬಂದಂತಹ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಾಹಿಸುವ ಮೂಲಕ ಕಾಲೇಜಿನೆ ಕೀರ್ತಿಯನ್ನು ಹೆಚ್ಚಿಸ ಬೇಕು ಎಂದು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಸಲಹೆ ನೀಡಿದ ಅವರು ಸಂಘದ ನೂತನ ಪದಾಧಿಕಾರಿಗಳಿಗೆ ಶುಭಾಕೋರಿದರು.

ಮಂಗಳೂರು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ವೆಂಕಟೇಶ್ ಬಾಳಿಗಾ, ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ಕಾರ್ಯದರ್ಶಿ ವಸಂತ್ ಕಾರಂದೂರ್ ಅತಿಥಿಗಳಾಗಿದ್ದರು. ಕಾಲೇಜಿನ ಸಂಚಾಲಕರಾದ ಎಸ್.ಜಯವಿಕ್ರಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜು ಆಡಳಿತ ಸಮಿತಿ ಸದಸ್ಯರಾದ ಡಾ. ಬಿ.ಜಿ ಸುವರ್ಣ, ಶೇಖರ್ ಪೂಜಾರಿ, ಪ್ರೋ. ರೇಣುಕಾ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುನೀಲ್ ದತ್ತ್ ಪೈ, ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರವನ್ ವಿ. ಪುತ್ರನ್, ಕಾರ್ಯದರ್ಶಿ ಚೇತಾನ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಗಂಗಾಧರ್ ಬಿ ಸ್ವಾಗತಿಸಿದರು. ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ಉಮ್ಮಪ್ಪ ಪೂಜಾರಿ ನೂತನವಾಗಿ ಅಯ್ಕೆಯಾದ ಸಂಘದ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಪ್ರಮಾಣ ವಚನ ಭೋಧಿಸಿದರು. ವಿದ್ಯಾರ್ಥಿ ಸಂಘದ ಸಹಕಾರ್ಯದರ್ಶಿ ದೀಕ್ಷಿತಾ ಧನ್ಯಾವಾದ ಸಮರ್ಪಿಸಿದರು.

English summary
Businessman Harish Sherigar's life is itself an inspirational and one should follow his life to achieve anything in the world, said actor Anantha Nag. He was talking to the crowd at a function of Gokarnanath College Student's organisation in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more