ಮಂಗಳೂರು ವಿಮಾನ ನಿಲ್ದಾಣ ಅದಾನಿ ಗ್ರೂಪ್‌ಗೆ ಹಸ್ತಾಂತರ

ಮಂಗಳೂರು, ನವೆಂಬರ್ 01: ಕೇಂದ್ರ ಸರ್ಕಾರದ ವಿಮಾನ ನಿಲ್ದಾಣ ಖಾಸಗೀಕರಣ ಮಾಡುವ ಪ್ರಕ್ರಿಯೆ ಅಧಿಕೃತವಾಗಿ ಜಾರಿಯಾಗಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಸಮೂಹ ಸಂಸ್ಥೆಗೆ ಹಸ್ತಾಂತರ ಮಾಡಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕ ವಿ. ವಿ. ರಾವ್ ಶುಕ್ರವಾರ ರಾತ್ರಿ 12 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರ ಮಾಡಿದರು. ವಿಮಾನಗಳ ಹಾರಾಟ ಹೊರತುಪಡಿಸಿ ಉಳಿದೆಲ್ಲಾ ರೀತಿಯ ನಿರ್ವಹಣೆಯ ಹೊಣೆ ಅದಾನಿ ಸಂಸ್ಥೆಯ ಪಾಲಾಗಿದೆ.

ವಿಮಾನ ನಿಲ್ದಾಣ ಹಸ್ತಾಂತರಕ್ಕೆ ಸಂಬಂಧಿಸಿದ ಒಡಂಬಡಿಕೆ ಪತ್ರವನ್ನು ಅದಾನಿ ಮಂಗಳೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿ. ಸಿಇಒ ಅಶುತೋಷ್ ಚಂದ್ರ ಮತ್ತುಅದಾನಿ ಏರ್ ಪೋರ್ಟ್‌ಗಳ ಸಿಇಒ ಬೆಹಾಡ್ ಝಂಡಿ ಅವರಿಗೆ ಹಸ್ತಾಂತರ ಮಾಡಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದ ಹೆಸರನ್ನು 'ಅದಾನಿ ಮಂಗಳೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್' ಎಂದು ಬದಲಾವಣೆ ಮಾಡಲಾಗಿದೆ. 50 ವರ್ಷಗಳ ಕಾಲ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆ ನೋಡಿಕೊಳ್ಳಲಿದೆ.

ಪ್ರಯಾಣಿಕರಿಗೆ ಸಿಹಿ ಹಂಚಿಕೆ

ಪ್ರಯಾಣಿಕರಿಗೆ ಸಿಹಿ ಹಂಚಿಕೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಸಮೂಹ ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು. ಬಳಿಕ ವಿಮಾನ ನಿಲ್ದಾಣದಿಂದ ಹೊರಟ ಮೊದಲ ವಿಮಾನದ ಎಲ್ಲಾ ಪ್ರಯಾಣಿಕರಿಗೆ ಅದಾನಿ ಸಮೂಹ ಸಂಸ್ಥೆ ಸಿಹಿ ಹಂಚಿಕೆ ಮಾಡಿತು.

ನಾಮಫಲಕ ಹಾಕಲಾಗಿದೆ

ನಾಮಫಲಕ ಹಾಕಲಾಗಿದೆ

ಮಂಗಳೂರು ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ, ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಅದಾನಿ ಏರ್‌ ಪೋರ್ಟ್ ಎಂಬ ಫಲಕವನ್ನು ಹಾಕಲಾಗಿದೆ. ಇನ್ನು ಮುಂದೆ ಮಂಗಳೂರು ವಿಮಾನ ನಿಲ್ದಾಣದ ಹೆಸರು 'ಅದಾನಿ ಮಂಗಳೂರು ಇಂಟರ್‌ನ್ಯಾಶನಲ್ ಏರ್ ಪೋರ್ಟ್' ಎಂದು ಬದಲಾಗಿದೆ.

50 ವರ್ಷಗಳ ನಿರ್ವಹಣೆ

50 ವರ್ಷಗಳ ನಿರ್ವಹಣೆ

ಅದಾನಿ ಸಂಸ್ಥೆ 50 ವರ್ಷಗಳ ಕಾಲ ವಿಮಾನ ನಿಲ್ದಾಣ ನಿರ್ವಹಣೆ ಮಾಡಲು ಗುತ್ತಿಗೆ ಪಡೆದಿದೆ. ಒಂದು ವರ್ಷದ ಅವಧಿಗೆ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಸಂಸ್ಥೆಗಳು ಸಮಾನಾಂತರವಾಗಿ ಕಾರ್ಯ ನಿರ್ವಹಣೆ ಮಾಡಲಿವೆ. ಬಳಿಕ ಸಂಪೂರ್ಣ ನಿರ್ವಹಣೆ ಅದಾನಿ ಸಂಸ್ಥೆ ಪಾಲಾಗಲಿದೆ.

ಮಂಗಳೂರು ಏರ್ ಪೋರ್ಟ್ ಟ್ವೀಟ್

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಸಮೂಹ ಸಂಸ್ಥೆಗೆ ಹಸ್ತಾಂತರ ಮಾಡಿದ ಕುರಿತು ಮಂಗಳೂರು ವಿಮಾನ ನಿಲ್ದಾಣ ಟ್ವೀಟ್ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+