ಮಂಗಳೂರಿನಲ್ಲಿ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಕೊಲೆ
ಮಂಗಳೂರು, ಜುಲೈ 11: ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯಿತಿ ಸದಸ್ಯನನ್ನು ಹತ್ಯೆ ಮಾಡಿರುವ ಘಟನೆ ನಿನ್ನೆ ರಾತ್ರಿ ಮಂಗಳೂರು ನಗರದ ಹೊರವಲಯದ ಅಡ್ಯಾರ್ ಪದವು ಎಂಬಲ್ಲಿ ನಡೆದಿದೆ. ಮೃತನನ್ನು ಅಡ್ಯಾರ್ ಗ್ರಾ.ಪಂ. ಸದಸ್ಯ ಯಾಕುಬ್ ಎಂದು ಗುರುತಿಸಲಾಗಿದೆ.
Recommended Video
ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಕಾಮೇಗೌಡರು | KameGowda | Oneindia Kannada
ಜುಲೈ 10ರ ಶುಕ್ರವಾರ ರಾತ್ರಿ ಸುಮಾರು ಒಂಬತ್ತು ಗಂಟೆ ಸಮಯದಲ್ಲಿ ಅಡ್ಯಾರ್ ಸಮೀಪದಲ್ಲಿ ತಂಡವೊಂದು ಯಾಕುಬ್ ಅವರ ಮೇಲೆ ದಾಳಿ ನಡೆಸಿದೆ. ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯಾಕುಬ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯಾಕುಬ್ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.
ಸ್ಥಳೀಯ ನಿವಾಸಿ, ಯಾಕುಬ್ ಪರಿಚಯಸ್ಥನೇ ಆಗಿದ್ದ ಶಾಕೀರ್ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಈ ಕೊಲೆಗೆ ವೈಯಕ್ತಿಕ ಹಾಗೂ ರಾಜಕೀಯ ದ್ವೇಷವೇ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.












Click it and Unblock the Notifications