ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ರನ್ ವೇಯಿಂದ ವಿಮಾನ ಜಾರಿದ ಘಟನೆ

|
Google Oneindia Kannada News

ಮಂಗಳೂರು, ಜುಲೈ 2: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೂದಲೆಳೆಯಲ್ಲಿ ತಪ್ಪಿದ ವಿಮಾನ ದುರಂತ ಘಟನೆ ಲೋಕಸಭೆಯಲ್ಲಿ ಪ್ರತಿಧ್ವನಿಸಿದೆ. ಇಂದು ಲೋಕಸಭಾ ಅಧಿವೇಶನದ ಶೂನ್ಯವೇಳೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಿಸುವ ವಿಚಾರದ ಬಗ್ಗೆ ಪ್ರಸ್ತಾಪಿಸಿದರು.

 ರನ್ ವೇಯಿಂದ ವಿಮಾನ ಜಾರಿದ ಪ್ರಕರಣ, ತನಿಖೆಗೆ ಖಾದರ್ ಒತ್ತಾಯ ರನ್ ವೇಯಿಂದ ವಿಮಾನ ಜಾರಿದ ಪ್ರಕರಣ, ತನಿಖೆಗೆ ಖಾದರ್ ಒತ್ತಾಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಇದೇ ಜೂನ್ 30 ಭಾನುವಾರ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ತನ್ನ ಲಯವನ್ನು ತಪ್ಪಿ ರನ್-ವೇಯಿಂದ ಹೊರಗೆ ಜಾರಿ ಸಂಭವನೀಯ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿತ್ತು. ವಿಮಾನ ಇನ್ನು 20 ಅಡಿ ಮುಂದಕ್ಕೆ ಚಲಿಸಿದ್ದರೆ, ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು. ಈ ಹಿಂದೆ 2010ರ ಮೇ 22ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಕಿರಿದಾದ ರನ್- ವೇಯಿಂದಾಗಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದು ವಿಮಾನದಲ್ಲಿದ್ದ 158 ಪ್ರಯಾಣಿಕರು ಮೃತಪಟ್ಟಿದ್ದರು.

Air India express flight skid issue discussed in parliament

ಆದ್ದರಿಂದ ಈ ಕೂಡಲೇ ಕೇಂದ್ರ ಸರ್ಕಾರವು ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆ ಹಾಗೂ ಮೂಲ ಸೌಲಭ್ಯಗಳ ಅಭಿವೃದ್ಧಿ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಹಾಗೂ ಈ ಘಟನೆ ಕುರಿತು ಸಮಗ್ರ ತನಿಖೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಸಂಸದರು ಆಗ್ರಹಿಸಿದರು.

English summary
MP Nalin Kumar Kateel discussed Air India express flight skid issue in parliament. He forced central government to the expansion of runway of Mangaluru airport and other basic facilities in airport.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X