ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಕನ್ನಡಿಗರು

ಮಂಗಳೂರು, ಮೇ.12: ನೊವೆಲ್ ಕೊರೊನಾ ವೈರಸ್ ಹರಡುವಿಕೆ ಭೀತಿ ನಡುವೆಯೇ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲು ಕೇಂದ್ರ ಸರ್ಕಾರವು ವಂದೇ ಭಾರತ್ ಮಿಷನ್ ಆರಂಭಿಸಿದೆ.

ಏರ್ ಇಂಡಿಯಾ ವಿಮಾನದ ಮೂಲಕ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರನ್ನು ಮಂಗಳವಾರ ಸುರಕ್ಷಿತವಾಗಿ ತವರಿಗೆ ಕರೆದುಕೊಂಡು ಬರಲಾಯಿತು. 176 ಮಂದಿ ಕನ್ನಡಿಗರನ್ನು ಹೊತ್ತ ವಿಶೇಷ ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು.

Air India Flight Carrying Passengers From Dubai Has Reached Mangaluru

ನೊವೆಲ್ ಕೊರೊನಾ ವೈರಸ್ ಭೀತಿಯಲ್ಲೇ ಜೀವನ ಸಾಗಿಸುತ್ತಿದ್ದ ಕನ್ನಡಿಗರನ್ನು ದುಬೈನಿಂದ ತವರಿಗೆ ಕರೆ ತರಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರಿಗೂ ವೈದ್ಯಕೀಯ ತಪಾಸಣೆ ಹಾಗೂ ಸ್ಕ್ರೀನಿಂಗ್ ನಡೆಸಲಾಗುತ್ತಿದೆ.

14 ದಿನ ಕ್ವಾರೆಂಟೈನ್ ಕಡ್ಡಾಯ:

ಕರ್ನಾಟಕಕ್ಕೆ ಆಗಮಿಸಿದ ಬಳಿಕ ಪ್ರಯಾಣಿಕರು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ. ಒಂದೊಮ್ಮೆ ಸ್ಕ್ರೀನಿಂಗ್ ಸಂದರ್ಭದಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿದರೆ ಅಂಥವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. 14 ದಿನಗಳ ಕ್ವಾರಂಟೈನ್ ಅವಧಿ ಬಳಿಕ ನಡೆಸಿದ ತಪಾಸಣೆಯಲ್ಲಿ ಕೊರೊನಾ ವೈರಸ್ ನೆಗಟಿವ್ ಬಂದಿದ್ದಲ್ಲಿ ಮಾತ್ರ ಮನೆಗೆ ತೆರಳಲು ಅವಕಾಶ ನೀಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+