ಕೇರಳ ವಿಧಾನಸಭೆ: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಅಶ್ರಫ್
ಮಂಜೇಶ್ವರ, ಮೇ 24: ದ್ವಿಭಾಷಾ ಸಂಗಮ ಭೂಮಿ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಎ.ಕೆ.ಎಂ ಅಶ್ರಫ್ ಅವರು ಕೇರಳ ವಿಧಾನಸಭೆಯಲ್ಲಿ ಸೋಮವಾರ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಆ ಮೂಲಕ ಗಡಿನಾಡ ಕನ್ನಡಿಗನೆಂಬ ಅಭಿಮಾನ ಮೂಡಿಸಿದ್ದು, ಕಾಸರಗೋಡು ಜಿಲ್ಲೆಯ ಬಹುಸಂಖ್ಯಾತ ಕನ್ನಡಿಗರ ಪ್ರತಿನಿಧಿಯಾಗಿ ಹೊರಹೊಮ್ಮಿದ್ದಾರೆ. ಭೌಗೋಳಿಕವಾಗಿ ಕಾಸರಗೋಡು ಜಿಲ್ಲೆ ಕೇರಳ ರಾಜ್ಯಕ್ಕೆ ಸೇರಿದ್ದರೂ ಅಲ್ಲಿ ಕನ್ನಡ ಮಾತನಾಡುವವರು ಹೆಚ್ಚಾಗಿದ್ದಾರೆ.
ಮಂಜೇಶ್ವರ ಮಂಡಲವು ರೂಪುಗೊಂಡು ಮೂರೂವರೆ ದಶಕಗಳು ಕಳೆದರೂ ಇಲ್ಲಿನ ಭಾಷೆ, ಸಂಸ್ಕೃತಿ, ಪ್ರದೇಶ ಹಾಗೂ ಅಭಿವೃದ್ಧಿಯಲ್ಲಿ ಇನ್ನೂ ಹಿಂದುಳಿದೆ. ಅತೀ ಹೆಚ್ಚು ಜನಸಂಖ್ಯೆಯಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿಗಾಗಿ ಜನರು ಎ.ಕೆ.ಎಂ ಅಶ್ರಫ್‌ರನ್ನು ಎದುರು ನೋಡುತ್ತಿದ್ದಾರೆ.

ಕೇರಳದ ಶಾಸನಸಭೆಯಲ್ಲಿ ಎ.ಕೆ.ಎಂ ಅಶ್ರಫ್ ಅಚ್ಚಗನ್ನಡಿಗರಾಗಿ, ಕನ್ನಡ ಭಾಷೆಯಲ್ಲಿ ಅಲ್ಲಾಹು (ದೇವರ)ನ ಹೆಸರಿನಲ್ಲಿ ಸತ್ಯ ಪ್ರತಿಜ್ಞೆಗೈದಿರುವುದು ಜನತೆಯಲ್ಲಿ ಒಂದಷ್ಟು ಭರವಸೆ ಹುಟ್ಟಿಸಿದೆ ಎಂದು ಹೇಳಬಹುದು.
ತನ್ನ ಹತ್ತನೇ ವಯಸ್ಸಿನಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಇಷ್ಟಪಟ್ಟು ರಾಜಕೀಯ ಅಭಿರುಚಿಯೊಂದಿಗೆ ಸಾರ್ವಜನಿಕ ರಂಗಕ್ಕಿಳಿದ ಎ.ಕೆ.ಎಂ ಅಶ್ರಫ್ ಅವರು ಎಂಎಸ್ಎಫ್‌ನ ಪಂಚಾಯತ್, ಮಂಡಲ, ಜಿಲ್ಲಾ, ರಾಜ್ಯ ಸಮಿತಿ ಹೀಗೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಗಳಿಸಿಕೊಂಡ ಎ.ಕೆ.ಎಂ ಅಶ್ರಫ್, ಮಲಿಯಾಳಿ , ಕನ್ನಡ, ತುಳು, ಉರ್ದು, ಇಂಗ್ಲಿಷ್ ಮುಂತಾದ ಭಾಷೆಗಳನ್ನು ಸುಲಲಿತವಾಗಿ ಮಾತನಾಡಬಲ್ಲರಾಗಿದ್ದಾರೆ.
ಅಲ್ಲದೆ ಕ್ರೀಡಾ ಕ್ಷೇತ್ರದಲ್ಲೂ ಆಸಕ್ತಿ ಹೊಂದಿರುವ ಶಾಸಕ ಎ.ಕೆ.ಎಂ ಅಶ್ರಫ್, ಕಾಸರಗೋಡು ಜಿಲ್ಲಾ ಕಬ್ಬಡಿ ಅಸೋಸಿಯೇಶನ್, ಅಂಡರ್ ಆರ್ಮ್ ಕ್ರಿಕೆಟ್ ಅಸೋಸಿಯೇಶನ್‌ನ ಅಧ್ಯಕ್ಷರಾಗಿದ್ದರು.
2010ರಿಂದ 2015 ರವರೆಗೆ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯರಾಗಿ, 2015ರಿಂದ 2020ರ ತನಕ ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ, ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications