ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನಗನಮರಡಿ ಬಸ್ ಅಪಘಾತ ಪ್ರಕರಣ: ಡ್ರೈವರ್ ಗಾಗಿ ಹುಡುಕಾಟ

|
Google Oneindia Kannada News

ಮಂಗಳೂರು, ನವೆಂಬರ್ 24:ಕನಗನಮರಡಿ ವಿಸಿ ನಾಲೆಗೆ ಬಸ್ ಉರುಳಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘೋರ ದುರಂತ ಇಂದು ಶನಿವಾರ ಸಂಭವಿಸಿದೆ. ಮಧ್ಯಾಹ್ನ 12 ಗಂಟೆಗೆ ದುರಂತ ಸಂಭವಿಸಿದ್ದು, ಇದುವರೆಗೆ 24 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಈ ದುರಂತದ ಸುದ್ದಿ ತಿಳಿದು ರಾಜ್ಯವೇ ಬೆಚ್ಚಿಬಿದ್ದಿದೆ.

ಮಂಡ್ಯ ಬಸ್‌ ಅಪಘಾತ: ಬದುಕಿ ಬಂದವರು ಘಟನೆ ಬಗ್ಗೆ ಹೇಳಿದ್ದು ಹೀಗೆಮಂಡ್ಯ ಬಸ್‌ ಅಪಘಾತ: ಬದುಕಿ ಬಂದವರು ಘಟನೆ ಬಗ್ಗೆ ಹೇಳಿದ್ದು ಹೀಗೆ

ಮುಖ್ಯಮಂತ್ರಿ ಕುಮಾರಸ್ವಾಮಿ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿ ಘಟನಾ ಸ್ಥಳಕ್ಕೆ ಧಾವಿಸಿ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

 ಕನಗನಮರಡಿ ಭೀಕರ ಬಸ್ ದುರಂತದಲ್ಲಿ ಪಾರಾಗಿ ಬಂದ ಗಿರೀಶ್ ಹೇಳಿದ್ದೇನು? ಕನಗನಮರಡಿ ಭೀಕರ ಬಸ್ ದುರಂತದಲ್ಲಿ ಪಾರಾಗಿ ಬಂದ ಗಿರೀಶ್ ಹೇಳಿದ್ದೇನು?

ಆದರೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ ಜಿ.ಪರಮೇಶ್ವರ್ ಮಾತ್ರ ಕೇರಳ ಪ್ರವಾಸ ಕೈಗೊಂಡಿದ್ದಾರೆ. ದುರಂತ ಸಂಭವಿಸದ ಸ್ಥಳಕ್ಕೆ ತೆರಳಬೇಕಿದ್ದ ಗೃಹ ಸಚಿವ ಜಿ ಪರಮೇಶ್ವರ್ ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಲೀಗ್ ಆಯೋಜಿಸಿರುವ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ತೆರಳಿದ್ದಾರೆ.

All are looking for driver

ಕಾಸರಗೋಡಿಗೆ ತೆರಳಲು ಡಾ ಜಿ. ಪರಮೇಶ್ವರ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕನಗನಮರಡಿಯಲ್ಲಿ ನಡೆದ ಘಟನೆ ದುರಾದೃಷ್ಟಕರ.

 ಮಂಡ್ಯ ಬಸ್ ಅಪಘಾತ: ದುರಂತದಲ್ಲಿ ಮೃತಪಟ್ಟವರ ಹೆಸರುಗಳು ಮಂಡ್ಯ ಬಸ್ ಅಪಘಾತ: ದುರಂತದಲ್ಲಿ ಮೃತಪಟ್ಟವರ ಹೆಸರುಗಳು

ಉಳಿದ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಘಟನೆ ಬಳಿಕ ಬಸ್ ಚಾಲಕನ ಓಡಿ ಹೋಗಿದ್ದಾನೆ ಎಂದು ಹೇಳಿದರು. ಡ್ರೈವರ್ ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು. ಅಗತ್ಯಬಿದ್ದರೆ ನಾಳೆ ಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದು ಅವರು ಸಮಜಾಯಿಷಿ ನೀಡಿದರು.

English summary
Deputy Chief Minister G. Parameshwara Said that Bus driver ran away after the bus accident. So we're looking for him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X