ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೂಡಬಿದರೆಯಲ್ಲಿ ನಡೆಯಲಿದೆ 79ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್‍

|
Google Oneindia Kannada News

ಮಂಗಳೂರು, ನವೆಂಬರ್. 23:ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ 79ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್‍ ಆಯೋಜಿಸಲಾಗಿದೆ. ಕ್ರೀಡಾಕೂಟ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನವೆಂಬರ್ 24ರಿಂದ 28ರವರೆಗೆ ನಡೆಯಲಿದೆ.

ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಇದೇ ಪ್ರಥಮ ಬಾರಿಗೆ ನಡೆಯುತ್ತಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ದೇಶದ 350 ಕ್ಕೂ ಅಧಿಕ ವಿಶ್ವವಿದ್ಯಾಲಯಗಳ ಸುಮಾರು 4500 ಅಥ್ಲೀಟ್ ಗಳು ಹಾಗೂ 2000 ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ.

ಅಥ್ಲಿಟ್‌ ಹಿಮಾ ದಾಸ್‌ಗೆ 10 ಲಕ್ಷ ಬಹುಮಾನ ಘೋಷಿಸಿದ ಪರಮೇಶ್ವರ್‌ಅಥ್ಲಿಟ್‌ ಹಿಮಾ ದಾಸ್‌ಗೆ 10 ಲಕ್ಷ ಬಹುಮಾನ ಘೋಷಿಸಿದ ಪರಮೇಶ್ವರ್‌

ರಾಷ್ಟ್ರದ ಖ್ಯಾತ ಕ್ರೀಡಾಪಟುಗಳನ್ನು ಹಾಗೂ ತರಬೇತುದಾರರನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ. ನಾಲ್ಕು ದಿನ ಹಗಲು ಮತ್ತು ರಾತ್ರಿ ಕ್ರೀಡಾಕೂಟದ ಸ್ಪರ್ಧೆಗಳು ನಡೆಯಲಿವೆ. ವಿಶೇಷವಾಗಿ ಹೊನಲು ಬೆಳಕು ಹಾಗೂ ಅತ್ಯಾಧುನಿಕ ಫೋಟೋ ಫಿನಿಶಿಂಗ್ ತಂತ್ರಜ್ಞಾನದ ವ್ಯವಸ್ಥೆಯನ್ನು ಮಾಡಲಾಗಿದೆ.

All India Inter University Athletics champion ship in Moodbidre

ನವೆಂಬರ್ 24 ರಂದು ಸಂಜೆ ಪಥಸಂಚಲನದ ನಂತರ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳಾಗಿರುವ ಡಾ.ಜಿ.ಪರಮೇಶ್ವರ್ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ .ಆದರೆ ಕ್ರೀಡಾಕೂಟದ ಸ್ಪರ್ಧೆಗಳು ನವೆಂಬರ್ 24ರಂದು ಬೆಳಗ್ಗೆ 6.30ರಿಂದಲೇ ಆರಂಭವಾಗಲಿದೆ.

ಅಥ್ಲೆಟಿಕ್ಸ್ ಅಸೋಸಿಯೇಷನ್ ನಿರ್ಲಕ್ಷ್ಯಕ್ಕೆ ಅವಕಾಶ ವಂಚಿತಳಾದ ಕ್ರೀಡಾಪಟುಅಥ್ಲೆಟಿಕ್ಸ್ ಅಸೋಸಿಯೇಷನ್ ನಿರ್ಲಕ್ಷ್ಯಕ್ಕೆ ಅವಕಾಶ ವಂಚಿತಳಾದ ಕ್ರೀಡಾಪಟು

ಕ್ರೀಡಾಕೂಟದ ಸಮಾರೋಪ ಸಮಾರಂಭವು ನವೆಂಬರ್ 28ರಂದು ಸಂಜೆ ಸ್ವರಾಜ್ಯ ಮೈದಾನದಲ್ಲಿ ಜರುಗಲಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಿದ್ದಾರೆ.

English summary
79th All India Inter University Athletics championship will be held at the Swaraj Maidan of Moodbidre from November 24 to 28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X