ಮಂಗಳೂರು ಮಿನಿ ವಿಧಾನಸೌಧದ ಉದ್ಘಾಟನೆ ಯಾವಾಗ?

ಮಂಗಳೂರು, ನವೆಂಬರ್ 06 : 2008-09ನೇ ಸಾಲಿನಲ್ಲಿ ಆರಂಭವಾದ ಮಂಗಳೂರಿನ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಟ್ಟಡವನ್ನು ಉದ್ಘಾಟನೆ ಮಾಡಲು ಜನಪ್ರತಿನಿಧಿಗಳಿಗೆ ಸಮಯ ಸಿಗುತ್ತಿಲ್ಲ. ಡಿಸೆಂಬರ್ 15ರೊಳಗೆ ಉದ್ಘಾಟನೆ ಮಾಡಬೇಕು ಎಂದು ನಿರ್ಧರಿಸಲಾಗಿದೆ.

ಮಂಗಳೂರಿನ ಮಿನಿ ವಿಧಾನಸೌಧ ಕಾಮಗಾರಿ ಪೂರ್ಣಗೊಂಡು ಒಂದು ತಿಂಗಳು ಕಳೆಯುತ್ತಾ ಬಂದಿದೆ. ಆದರೆ, ಜನಪ್ರತಿನಿಧಿಗಳಿಗೆ ಸಮಯವಿಲ್ಲದ ಕಾರಣ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಮಿನಿ ವಿಧಾನಸೌಧ ಕಾಮಗಾರಿಯನ್ನು 2008-09ನೇ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. 2015ರಲ್ಲಿ ಕಾಮಗಾರಿ ಪೂರ್ಣಗೊಂಡಿದೆ. [ಕುಂಟುತ್ತಾ ಸಾಗಿದೆ ಮಿನಿ ವಿಧಾನಸೌಧ ಕಾಮಗಾರಿ]

mangaluru

4 ಕೋಟಿಯಿಂದ 7 ಕೋಟಿಗೆ ಏರಿಕೆ : 2009ರಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದ ಆಡಳಿತವಿದ್ದಾಗ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳೂರು ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು.[ಮಿನಿ ವಿಧಾನಸೌಧಕ್ಕೆ ಮೂರು ತಿಂಗಳ ಡೆಡ್ ಲೈನ್]

ಆಗ ಸುಮಾರು 4 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕಾಮಗಾರಿ ಆರಂಭಗೊಂಡಿತ್ತು. 2015ರ ಸೆಪ್ಟೆಂಬರ್ ವೇಳೆಗೆ ಕಾಮಗಾರಿ ವೆಚ್ಚ 7.5 ಕೋಟಿಗೆ ಏರಿಕೆಯಾಗಿದೆ. 2011ರಲ್ಲಿ ಬಿಡುಗಡೆಯಾಗಬೇಕಿದ್ದ 2.75 ಕೋಟಿ ರೂ. ಅನುದಾನ ವಿಳಂಬವಾಗಿ ಬಿಡುಗಡೆ ಕಾರಣ 4 ವರ್ಷದಲ್ಲಿ ಮುಗಿಯಬೇಕಿದ್ದ ಕಾಮಗಾರಿ 8 ವರ್ಷದಲ್ಲಿ ಪೂರ್ಣಗೊಂಡಿತು.

ಉದ್ಘಾಟನೆ ಮಾಡಲಿದ್ದಾರೆ ಸಿದ್ದರಾಮಯ್ಯ : ಮಿನಿ ವಿಧಾನಸೌಧದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸುವ ಉದ್ದೇಶವಿದೆ. ದಿನಾಂಕ ನಿಗದಿಪಡಿಸುವಂತೆ ಮುಖ್ಯಮಂತ್ರಿ ಕಾರ್ಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದ್ದಾರೆ.

ಒನ್ ಇಂಡಿಯಾ ಕನ್ನಡ ಜೊತೆ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು, 'ಮಿನಿ ವಿಧಾನಸೌಧ ಕಾಮಗಾರಿ ಪೂರ್ಣಗೊಂಡಿದೆ. ಡಿಸೆಂಬರ್ ಒಳಗಾಗಿ ಉದ್ಘಾಟನೆ ಮಾಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು' ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+