ಯತೀಂದ್ರ ಮೇಲಿನ ದೂರು ರಾಜಕೀಯ ಪ್ರೇರಿತ ಪಿತೂರಿ-ಸಿದ್ದರಾಮಯ್ಯ

ಮಂಗಳವಾರ ನಗರದ ಟಿ.ಎಂ.ಎ ಪೈ ಸಭಾಂಗಣದಲ್ಲಿ ಉಡುಪಿಯ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಪುತ್ರಿಯ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಸಿಎಂ ಉತ್ತರಿಸಿದರು.

ಮಂಗಳೂರು, ಮೇ 10: ನನ್ನ ಮಗ ಡಾ ಯತೀಂದ್ರ ವಿರುದ್ಧ ಬೇನಾಮಿ ಆಸ್ತಿಯ ಬಗ್ಗೆ ದೂರು ನೀಡಲಾಗಿರುವುದು ರಾಜಕೀಯ ಪ್ರೇರಿತ ಪಿತೂರಿ. ಇದೊಂದು ಆಧಾರ ರಹಿತ ಆರೋಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಹೇಳಿದ್ದಾರೆ.

ಮಂಗಳವಾರ ನಗರದ ಟಿ.ಎಂ.ಎ ಪೈ ಸಭಾಂಗಣದಲ್ಲಿ ಉಡುಪಿಯ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಅವರ ಪುತ್ರಿಯ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸಿದರು.

ರಾಜ್ಯದ ವಿಧಾನ ಪರಿಷತ್‌ನ ಮೂರು ಸ್ಥಾನಗಳ ಆಯ್ಕೆಗೆ ಸಂಬಂಧಿಸಿದಂತೆ ಹೈಕಮಾಂಡಿಗೆ ಹೆಸರು ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Allegations on my son Yathindra is just a game play of Opposition - CM Siddaramaiah

ರಾಜ್ಯಕ್ಕೆ ಎಐಪಿಸಿಸಿ ವೀಕ್ಷಕ ಕೆಸಿ ವೇಣುಗೋಪಾಲ್ ಭೇಟಿ ನೀಡಿರುವುದು ಮುಂದಿನ ಚುನಾವಣೆಯ ವಿಷಯದ ಬಗ್ಗೆ ಚರ್ಚಿಸಲು ಹೊರತು ಬೇರೆ ಯಾವ ವಿಷಯವನ್ನೂ ಚರ್ಚಿಸಲು ಅಲ್ಲ. ರಾಜ್ಯದ ಕಾಂಗ್ರೆಸ್ ಮುಖಂಡರ ಬಗ್ಗೆ ಯಾರೂ ದೂರು ನೀಡಿಲ್ಲ.ಕೆ.ಪಿ.ಸಿ.ಸಿ ಅಧ್ಯಕ್ಷರ ಆಯ್ಕೆ ಇನ್ನು ಅಂತಿಮ ಗೊಂಡಿಲ್ಲ.ಈ ಬಗ್ಗೆ ಹೈ ಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ಸರಕಾರ ನಾಲ್ಕು ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಈ ಬಗ್ಗೆ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಸರಕಾರದ ಸಾಧನೆಯ ಬಗ್ಗೆ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಅರಣ್ಯ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ .ಪಾಟೀಲ್, ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಾಹದೇವಪ್ಪ , ಶಾಸಕರಾದ ಅಭಯ ಚಂದ್ರ ಜೈನ್,ಮೊಯ್ದೀನ್ ಬಾವ, ಮೇಯರ್ ಕವಿತಾ ಸನಿಲ್ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+