ಚಿತ್ರದುರ್ಗ ಮೂಲದ ವಿದ್ಯಾರ್ಥಿನಿ ಆಳ್ವಾಸ್ ಕಾಲೇಜಿನಲ್ಲಿ ಆತ್ಮಹತ್ಯೆ
ಮಂಗಳೂರು, ಜನವರಿ 26: ಐದನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಯೊಬ್ಬಳುಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ಚಿತ್ರದುರ್ಗದ ಮೂಲದ ರಚನಾ ಎಂದು ಗುರುತಿಸಲಾಗಿದೆ.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ರಚನಾ, ಗುರುವಾರ ಕಾಲೇಜಿಗೆ ಸ್ಟಡಿ ಹಾಲಿಡೇಸ್ ಇರುವುದರಿಂದ ಲೈಬ್ರರಿಗೆ ಬಂದಿದ್ದಳು. ಬಳಿಕ ಕಾಲೇಜಿನ 5 ನೇ ಮಹಡಿಗೆ ತೆರಳಿದ ರಚನಾ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

ಈ ಹಿಂದೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ರಚನಾ ಕೌನ್ಸಿಲಿಂಗ್ ಪಡೆದಿದ್ದಳು ಎನ್ನಲಾಗಿದೆ. ಪ್ರಥಮ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದಿದ್ದ ರಚನಾ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕಾಗಿ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಲಾಗಿದೆ.
ರಚನಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಮೂಡಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದು ಆಳ್ವಾಸ್ ಕಾಲೇಜಿನಲ್ಲಿ ನಡೆಯುತ್ತಿರುವ ಮೊದಲ ಆತ್ಮಹತ್ಯೆಯೇನಲ್ಲ. ಈ ಹಿಂದೆ ಕ್ರೀಡಾ ವಿದ್ಯಾರ್ಥಿನಿ ಕಾವ್ಯಶ್ರೀ ಆತ್ಮಹತ್ಯೆ ರಾಜ್ಯದಾದ್ಯಂತ ಸುದ್ದಿಗೆ ಗ್ರಾಸವಾಗಿತ್ತು. ಕೆಲವು ದಿನಗಳ ಹಿಂದೆ ಆಳ್ವಾಸ್ ಕ್ಯಾಂಪಸ್ ನ ನಂದಿನಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ತೇಜಸ್(16) ತನ್ನ ಜನ್ಮ ದಿನದಂದೇ (ಜನವರಿ 8) ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ. ಇದೀಗ ರಚನಾ ಆತ್ಮಹತ್ಯೆ ಮಾಡಿಕೊಂಡಿದ್ದು ಕಾಲೇಜಿನ ಸಾವಿನ ಸರಣಿ ನಿಲ್ಲುತ್ತಿಲ್ಲ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications